ಸಮಗ್ರ ನ್ಯೂಸ್: ಭಾರೀ ಮಳೆಯಿಂದಾಗಿ ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು.
ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಸುಳ್ಯ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಘಟನಾ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿದ್ದಾರೆ.
ಈ ಕುರಿತಂತೆ ‘ಸಮಗ್ರ ಸಮಾಚಾರ’ದೊಂದಿಗೆ ಮಾತನಾಡಿದ ಅವರು ಸದ್ಯಕ್ಕೆ ತುರ್ತಾಗಿ ತಾತ್ಕಾಲಿಕ ಕಾಲು ಸೇತುವೆ ನಿರ್ಮಿಸಲು ಸ್ಥಳೀಯ ಪಂಚಾಯತ್ ಗೆ ತಿಳಿಸಿದ್ದೇವೆ.
ಮಳೆಗಾಲ ಕಡಿಮೆಯಾದ ಬಳಿಕ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ಮೂಲಕ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಸೇತುವೆ ಅಥವಾ ತೂಗುಸೇತುವೆ ನಿರ್ಮಿಸಲು ಮನವಿ ಸಲ್ಲಿಸಲಾಗುವುದು. ಹೊಳೆಯ ಒಳಹರಿವು ಕಡಿಮೆಯಾಗುವವರೆಗೆ ತಾತ್ಕಾಲಿಕವಾಗಿ ಇರುವ ಸೇತುವೆ ಬಳಸಿಕೊಳ್ಳಲು ನಿವಾಸಿಗಳಿಗೆ ತಿಳಿಸಿದ್ದೇವೆ ಎಂದಿದ್ದಾರೆ.