ಜು.17ರ ವರೆಗೂ ರಾಜ್ಯದಲ್ಲಿ ಮಳೆಯಾರ್ಭಟ| ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ ಮುಂದುವರೆದಿದ್ದು, ರಾಜ್ಯಾದ್ಯಂತ ಜುಲೈ 17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Ad Widget ... ..

ಅಲ್ಲದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೆ, ಬೀದರ್, ವಿಜಯಪುರ, ಹಾಸನ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಸಾಧ್ಯತೆಯಿದೆ.

Ad Widget

ಕರಾವಳಿ ಜಿಲ್ಲೆಯ ಮೀನುಗಾರರಿಗೆ ಮುಂದಿನ 48 ಗಂಟೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ವೇಗ ಗಂಟೆಗೆ 45-55 ಕಿಮೀ ಇದ್ದು, 65 ಕಿ.ಮೀ ತಲುಪುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮುಂದಿನ 2 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *