ಕೊನೆಗೂ ಪಠ್ಯಪುಸ್ತಕ ಸೇರಿದ ನಾರಾಯಣ ಗುರು| ಸ್ಪಷ್ಟನೆ ನೀಡಿದ ಗೃಹಸಚಿವ

ಸಮಗ್ರ ನ್ಯೂಸ್: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂಬುದಾಗಿ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ.

Ad Widget ... ..

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಬ್ರಹ್ಮರ್ಷಿ ನಾರಾಯಣ ಗುರುಗಳ ಪಠ್ಯವನ್ನು ಪ್ರಸ್ತುತ 10ನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಅಳವಡಿಸಿರುವುದನ್ನು ತೆಗೆದು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಯಥಾವತ್ತಾಗಿ ಅಳವಡಿಸಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *