Ad Widget .

ಸುಳ್ಯ ; ಗೃಹಪ್ರವೇಶಕ್ಕೆ ಸಜ್ಜಾದ ಮನೆ ಭಾರೀ ಮಳೆಗೆ ನೆಲಸಮ

ಸುಳ್ಯ: ಭಾರೀ ಮಳೆಯಿಂದಾಗಿ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ನೆಲಸಮವಾಗಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ನಡೆದಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂರು ದಿನದ ಹಿಂದೆ ಮರ ಬಿದ್ದು ಮನೆ ಗೋಡೆಗಳಲ್ಲಿ ಬಿರುಕು ಕಂಡಿತ್ತು.

Ad Widget . Ad Widget .

ಬಿರುಕು ಬಿಟ್ಟಿದ್ದ ಗೋಡೆ ದುರಸ್ತಿ ಕೆಲಸ ಮಾಡಲಾಗಿದ್ದು, ಜುಲೈ 18ರಂದು ಗೃಹಪ್ರವೇಶ ನೆರವೇರಿಸಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿತ್ತು.

ಅಷ್ಟು ಹೊತ್ತಿಗಾಗಲೇ ಗುಡ್ಡ ಕುಸಿದು ಮನೆ ಸಂಪೂರ್ಣ ನೆಲಸಮವಾಗಿದೆ. ಕಷ್ಟಪಟ್ಟು ಕಟ್ಟಿದ್ದ ಮನೆ ಗೃಹಪ್ರವೇಶಕ್ಕೆ ಮೊದಲೇ ನೆಲಸಮವಾಗಿದ್ದರಿಂದ ಮನೆಯವರು ಕಂಗಾಲಾಗಿದ್ದಾರೆ.

Leave a Comment

Your email address will not be published. Required fields are marked *