Ad Widget .

ಬೆಳ್ತಂಗಡಿ ; ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ನಿಧನ

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟ ಘಟನೆಯೊಂದು ನಡೆದಿದೆ.

Ad Widget . Ad Widget .

ಮಲ್ಲಿಕಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

Ad Widget . Ad Widget .

ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೃತರು ಪತಿ, ತಂದೆ, ತಾಯಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *