Ad Widget .

ಪಿಎಸ್ಐ ನೇಮಕಾತಿ ಅಕ್ರಮ ಕೊಲೆಗಿಂತಲೂ ಗಂಭೀರ‌ – ಹೈಕೋರ್ಟ್

ಸಮಗ್ರ ನ್ಯೂಸ್: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಇಂದು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಈ ಅಕ್ರಮ ಕೊಲೆಗಿಂತಲೂ ಗಂಭೀರ ಅಪರಾಧ ಎಂದು ಅಭಿಪ್ರಾಯಪಟ್ಟಿದೆ.

Ad Widget . Ad Widget . Ad Widget . Ad Widget .

‘ಇದು ಕೊಲೆಗಿಂತ ಗಂಭೀರವಾದ ಅಪರಾಧ, ಕೊಲೆಯಾದರೆ ಒಬ್ಬ ಸಾವಿಗೀಡಾಗುತ್ತಾನೆ, ಇಲ್ಲಿ 50 ಸಾವಿರ ಅಭ್ಯರ್ಥಿಗಳು ತೊಂದರೆಗೀಡಾಗಿದ್ದಾರೆ’ ಎಂದು ನ್ಯಾ.ಹೆಚ್.ಪಿ.ಸಂದೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಅಕ್ರಮ ನೇಮಕಾತಿ ಸಮಾಜಕ್ಕೇ ಬಹು ದೊಡ್ಡ ಬೆದರಿಕೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ? ಎಂದು ಪ್ರಶ್ನಿಸಿದ್ದಾರೆ. ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದ್ದು, ಪಿಎಸ್​ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ‌ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಆರೋಪಿಗಳ ಕರೆ ವಿವರವನ್ನು ಪರಿಶೀಲಿಸಲಾಗುತ್ತಿದೆ, ಸಿಐಡಿ ಡಿಜಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಲಜ್ಜೆಗೆಟ್ಟವರಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಹೀಗಾಗಿ ಜಾಮೀನು ನೀಡದಂತೆ ಎಸ್​ಪಿಪಿ ವಿ.ಎಸ್.ಹೆಗ್ಡೆ ಮನವಿ ಮಾಡಿದ್ದಾರೆ.

ಪಿಎಸ್ಐ ಪರೀಕ್ಷಾ ನೇಮಕಾತಿ ಅಕ್ರಮ ಎಸಗಿರುವ ಆರೋಪದಡಿ ‌ಬಂಧಿತರಾಗಿರುವ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಬುಧವಾರ ಕಸ್ಟಡಿ ಅಂತ್ಯ ಹಿನ್ನೆಲೆ ಜು.14ರಂದು ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿ ಮತ್ತೆ ಮೂರು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಿಬ್ಬಂದಿ ಮೂಲಕ ಅಭ್ಯರ್ಥಿಗಳೊಂದಿಗೆ ಕೋಟ್ಯಾಂತರ ರೂಪಾಯಿ ಪಡೆದ ಆರೋಪ ಹಿನ್ನೆಲೆ ಎಡಿಜಿಪಿ ದರ್ಜೆ ಅಧಿಕಾರಿಯನ್ನ ಜುಲೈ 4ರಂದು ಸಿಐಡಿ ಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿ ಇಟ್ಟಿತ್ತು.

Leave a Comment

Your email address will not be published. Required fields are marked *