Ad Widget .

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ನ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

Ad Widget . Ad Widget .

ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *