Ad Widget .

ಮಂಗಳೂರು: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಮೇಲೆ ಫೈರಿಂಗ್

ಸಮಗ್ರ ನ್ಯೂಸ್: ಉಳ್ಳಾಲ ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆ ಪೊಲೀಸ್ ಸಿಬಂದಿ ಫೈರಿಂಗ್ ನಡೆಸಿರುವ ಘಟನೆ ಕೊಣಾಜೆ‌ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

14ಕ್ಕೂ ಅಧಿಕ ಪ್ರಕರಣ ಇರುವ ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ನಡೆದಿದೆ. ಫೈರಿಂಗ್ ವೇಳೆ ಉಳ್ಳಾಲ ಠಾಣಾ ಪೊಲೀಸ್ ಸಿಬಂದಿ ವಾಸುದೇವ ಹಾಗೂ ಅಕ್ಬರ್ ಎಂಬುವವರು ಗಾಯಗೊಂಡಿದ್ದಾರೆ. ಆರೋಪಿ ಮುಕ್ತರ್ ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ. ಆದರೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆತನನ್ನು ನಿನ್ನೆ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇಂದು ಮುಂಜಾನೆ ಬೈಕಿನ ಮಹಜರಿಗೆಂದು ಕೊಣಾಜೆ ಅಸೈಗೋಳಿಗೆ ಕರೆದೊಯ್ದಿದ್ದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಠಾಣಾಧಿಕಾರಿ ಸಂದೀಪ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಕಾಲಿಗೆ ಗುಂಡು ಹೊಡೆದಿದ್ದಾರೆ.

Ad Widget . Ad Widget . Ad Widget .

ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಪೊಲೀಸ್ ಸಿಬಂದಿ ಹಾಗೂ ಆರೋಪಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *