ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಇಂದು ಮತದಾನದ ನಂತರ, ಇದೇ ೨೧ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾಲಿ ಇರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಇದೇ ೨೪ರಂದು ಕೊನೆಗೊಳ್ಳುತ್ತಿದೆ.
ಈ ನಡುವೆ ಉಪರಾಷ್ಟ್ರಪತಿ ಸ್ಥಾನಕ್ಕೆ ಕೂಡ ಮುಂದಿನ ತಿಂಗಳು ಆಗಸ್ಟ್ ೬ರಂದು ಚುನಾವಣೆ ನಡೆಯಲಿದೆ.