Ad Widget .

ವಿದೇಶದಿಂದ ಬಂದ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣ| ಆಸ್ಪತ್ರೆಗೆ ದಾಖಲಾದ ಯುವಕ

ಸಮಗ್ರ ನ್ಯೂಸ್: ವಿದೇಶದಿಂದ ಬಂದ ಯುವಕನೋರ್ವನಲ್ಲಿ ಮಂಕಿಪಾಕ್ಸ್‌ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಕಣ್ಣೂರಿನ ಪರಿಯಾರಂ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಕಣ್ಣೂರು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Ad Widget . Ad Widget .

ವಿದೇಶದಿಂದ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಇಲ್ಲಿಗೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಾಣಿಸಿದ್ದರಿಂದ ಆತ ಸ್ವತಃ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು.

Ad Widget . Ad Widget .

ಯುವಕನ ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫ‌ಲಿತಾಂಶ ಬಂದ ಬಳಿಕವಷ್ಟೇ ಆತನಿಗೆ ಮಂಕಿಪಾಕ್ಸ್‌ ತಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ. ಪ್ರಸ್ತುತ ಯುವಕನನ್ನು ಐಸೋಲೇಶನ್‌ನಲ್ಲಿರಿಸಿ ನಿಗಾ ಇರಿಸಲಾಗಿದೆ ಎಂದು ಅವರು ವಿವರಿಸಿದರು. ಕೇರಳದಲ್ಲಿ ಮೊದಲ ಮಂಕಿಪಾಕ್ಸ್‌ ಪ್ರಕರಣ ಜು. 12ರಂದು ದಾಖಲಾಗಿತ್ತು.

Leave a Comment

Your email address will not be published. Required fields are marked *