Ad Widget .

ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲೂ ಬಿಜೆಪಿಗೇ ಬಹುಮತ| ಹೊರಬಿದ್ದ ಸಮೀಕ್ಷೆಯಿಂದ ಕೇಸರಿ ಪಡೆ ಫುಲ್ ಖುಷ್

ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯಲ್ಲಿ ಇತರ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಆಡಳಿತಾರೂಢ ಬಿಜೆಪಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಭಾರೀ ಜಿದ್ದಾಜಿದ್ದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚುಕಡಿಮೆ ಕಳೆದ ಬಾರಿಯಷ್ಟೇ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಯಿಂದ ಗೊತ್ತಾಗಿದೆ.

Ad Widget . Ad Widget .

2018ರಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 2023ರಲ್ಲೂ ಹೆಚ್ಚು ಕಡಿಮೆ ಅಷ್ಟೇ ಸ್ಥಾನವನ್ನು ಪಡೆಯಬಹುದೆಂದು ದೆಹಲಿ ಮೂಲದ ಖಾಸಗಿ ಸಂಸ್ಥೆ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಮಿಷನ್ 150 ಎಂದು ಬಿಜೆಪಿಯ ಎಲ್ಲ ನಾಯಕರು ಹೇಳುತ್ತಿದ್ದರಾದರೂ ಆಡಳಿತ ವಿರೋಧಿ ಅಲೆ, ಸರ್ಕಾರದ ಮೇಲೆ ಬಂದಿರುವ ಗಂಭೀರ ಸ್ವರೂಪದ ಭ್ರಷ್ಟಾಚಾರದ ಆರೋಪಗಳು, ಸಮರ್ಥ ನಾಯಕತ್ವ ಇಲ್ಲದಿರುವುದು, ಗೊಂದಲ ಹೀಗೆ ಹತ್ತು ಹಲವು ಕಾರಣಗಳಿಂದ ಬಿಜೆಪಿ ಮೂರಂಕಿ ದಾಟಬಹುದೆಂದು ಸಮೀಕ್ಷೆ ಹೇಳಿದೆ.

Ad Widget . Ad Widget .

ರಾಜ್ಯದ ಜನತೆಗೆ ಬಿಜೆಪಿ ಬಗ್ಗೆ ಹೇಳಿಕೊಳ್ಳುವಂತಹ ಸದಾಭಿಪ್ರಾಯ ಇಲ್ಲ. ಆದರೆ ಪ್ರಧಾನಿ ನರೇಂದ್ರಮೋದಿಯವರ ವ್ಯಕ್ತಿತ್ವವೇ ಕಮಲ ನಾಯಕರಿಗೆ ಆಸರೆಯಾಗಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ರಾಜಧಾನಿ ಬೆಂಗಳೂರು, ಮೈಸೂರು ಕರ್ನಾಟಕ, ಕರಾವಳಿ, ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 5 ಭಾಗಗಳಲ್ಲಿ ಸಮೀಕ್ಷೆ ನಡೆಸಲಾಗಿತ್ತು.

Leave a Comment

Your email address will not be published. Required fields are marked *