Ad Widget .

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ತುಮಕೂರು ವಿಭಾಗ ಪ್ರಚಾರಕ ರಾಜೇಶ್ ಕುಂತೂರು ಅವರು ಬಿಜೆಪಿ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.

Ad Widget . Ad Widget .

2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಡಬದವರು. ವಿದ್ಯಾರ್ಥಿ ಜೀವನದಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ ಪುತ್ತೂರು ಗ್ರಾಮಾಂತರ ತಾಲೂಕಿನ ಅರಿಯಡ್ಕ ಮಂಡಲದ ಮಂಡಲ ಕಾರ್ಯವಾಹರಾಗಿ ಜವಾಬ್ದಾರಿ ನಿರ್ವಹಿಸಿದ್ದರು.

Ad Widget . Ad Widget .

ಪದವಿ ವಿದ್ಯಾಭ್ಯಾಸ ಮುಗಿಸಿದ ನಂತರ ಸಂಘದ ಪ್ರಚಾರಕರಾಗಿ ತನ್ನ ಪೂರ್ಣ ಜೇವನವನ್ನು ಸಂಘ ಕಾರ್ಯಕ್ಕೆ ಅರ್ಪಿಸಿ ಮೂಡಬಿದ್ರೆ ತಾಲೂಕು ಪ್ರಚಾರಕರಗಿ, ಸಾಗರ ಜಿಲ್ಲಾ ಪ್ರಚಾರಕರಾಗಿ,ಶಿವಮೊಗ್ಗ ಜಿಲ್ಲಾ ಪ್ರಚಾರಕರಾಗಿ,ಮೈಸೂರು ವಿಭಾಗ ಪ್ರಚಾರಕರಾಗಿ ಪ್ರಸ್ತುತ ತುಮಕೂರು ವಿಭಾಗ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *