Ad Widget .

ಚಾಕೊಲೇಟ್ ಗಂಟಲಲ್ಲಿ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು

ಸಮಗ್ರ ನ್ಯೂಸ್: ಕವರ್‌ ಸಹಿತ ಚಾಕಲೇಟ್‌ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರು ಘಟನೆ ಕುಂದಾಪುರ ತಾಲೂಕಿನ ಉಪ್ಪುಂದ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ.

Ad Widget . Ad Widget .

ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ.

Ad Widget . Ad Widget .

ವಿದ್ಯಾರ್ಥಿನಿ ಸಮನ್ವಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಾಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್‌ ಸಹಿತ ಚಾಕಲೇಟ್‌ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *