Ad Widget .

ಉಡುಪಿ: ಅತಿವೇಗದಿಂದ ಬಂದು ಪಲ್ಟಿಯಾದ ಅಂಬ್ಯುಲೆನ್ಸ್| ಟೋಲ್ ಪ್ಲಾಝಾ ಸಿಬ್ಬಂದಿ ಸೇರಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌ ವೊಂದು ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್‌ ಗೇಟ್‌ ನಲ್ಲಿ ಬುಧವಾರ ನಡೆದಿದೆ.

Ad Widget . Ad Widget .

ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್‌ ಶಿರೂರು ಟೋಲ್‌ ಗೇಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

Ad Widget . Ad Widget .

ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆಯಾಗಿದ್ದು, ಇನ್ನಿಬ್ಬರು ಪುರುಷರೆಂದು ತಿಳಿದು ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಅಂಬ್ಯುಲೆನ್ಸ್‌ ವಾಹನ ಶಿರೂರು ಟೋಲ್‌ ಪ್ಲಾಝಾ ಬಳಿಗೆ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆಯಲ್ಲಿ ಟೋಲ್‌ ಪ್ಲಾಝಾದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಮುಂದಾಗಿದ್ದಾರೆ. ಆದರೆ ವೇಗವಾಗಿ ಬಂದ ಅಂಬ್ಯುಲೆನ್ಸ್‌ ಟೋಲ್‌ ಫ್ಲಾಝಾದಲ್ಲಿನ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಅಂಬ್ಯುಲೆನ್ಸ್‌ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಅಂಬ್ಯುಲೆನ್ಸ್‌ಗೆ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್‌ ಸಿಬ್ಬಂದಿಗಳು ಕೂಡ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರೂರು ಟೋಲ್‌ನಲ್ಲಿ ನಡೆದಿರುವ ಘಟನೆ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋದಲ್ಲಿ ಅಪಘಾತವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಅಪಘಾತದ ತೀವ್ರತೆಗೆ ಅಂಬ್ಯುಲೆನ್ಸ್‌ ಜಖಂ ಆಗಿದೆ. ಇನ್ನು ಅಂಬ್ಯುಲೆನ್ಸ್‌ ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬೈಂದೂರು ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *