Ad Widget .

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ.

Ad Widget . Ad Widget .

ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ ಜೀವನವೇ ಅಸ್ತವ್ಯಸ್ತವಾಗುವ ಆತಂಕ ಎದುರಾಗಿದೆ.

Ad Widget . Ad Widget .

ಕೇಂದ್ರ ಸರ್ಕಾರಕ್ಕೆ ಗಾಡ್ಗಿಳ್ ವರದಿಯು 2010ರಲ್ಲಿ ಸಲ್ಲಿಕೆಯಾಗಿತ್ತು. ಗಾಡ್ಗಿಳ್ ವರದಿ ಅವೈಜ್ಞಾನಿಕವಾಗಿದೆ ಎಂದು ಇಸ್ರೋ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದ ಸಮಿತಿಯನ್ನು ರಚನೆಯನ್ನು ಮಾಡಲಾಗಿತ್ತು. ಕಸ್ತೂರಿ ರಂಗನ್ ಸಮಿತಿಯ ಅಧ್ಯಯನವನ್ನು ಮಾಡಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲು ವರದಿಯನ್ನು ನೀಡಿತ್ತು. ಅದರಂತೆ ಗುಜರಾತ್ ತಮಿಳುನಾಡಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ ವ್ಯಾಪ್ತಿಯನ್ನು ಹೇಳಿತ್ತು. ಅದರಂತೆ ಕರ್ನಾಟಕದ 20668 ಚದರ ಕಿ.ಮೀ ಪ್ರದೇಶ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಒಳಪಡುತ್ತದೆ. ಅಂದರೆ ಕರುನಾಡಿನ ಸಾವಿರಾರು ಹಳ್ಳಿಯ ಜನರ ಬದುಕು ಬೀದಿಗೆ ಬೀಳಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿಮೊಗ್ರು, ಶಿರ್ಲಾಲು, ನಾವರಾ, ಸವಣಾಲು, ಚಾರ್ಮಾಡಿ, ಸುಲ್ಕೇರಿ, ನಾವೂರು, ನೆರಿಯ, ನಾಡ, ಪುದುವೆಟ್ಟು, ಶಿಶಿಲ, ಕಳೆಂಜಾ, ಶಿಬಾಜೆ, ರೆಖ್ಯಾ ಗ್ರಾಮಗಳು ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಬರಲಿದೆ.

ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿ ಗೋಳಿತೊಟ್ಟು, ಶಿರಾಡಿ, ಅಲಂತಾಯ, ಸಿರಿಬಾಗಿಲು, ಬಲ್ಯಾ, ಕೊಂಬಾರು, ಬಿಳಿನೆಲೆ, ದೊಳ್ಪಾಡಿ, ಬಳ್ಪ, ಏನೆಕಲ್ಲು, ಸುಬ್ರಮಣ್ಯ, ಐನೆಕಿದು ಗ್ರಾಮಗಳು ಕಸ್ತೂರಿ ರಂಗನ್ ವರದಿಯಲ್ಲಿವೆ.

ಸುಳ್ಯ ತಾಲೂಕಿನ ನಾಲ್ಕೂರು, ಕೂತ್ಕುಂಜ, ದೇವಚಳ್ಳ, ಹರಿಹರಪಲ್ಲತಡ್ಕ, ಬಾಳುಗೋಡು, ಮಡಪ್ಪಾಡಿ, ಉಬರಡ್ಕ ಮಿತ್ತೂರು, ಕಲ್ಮಕಾರು, ಅರಂತೋಡು, ಅಲೆಟ್ಟಿ, ಸಂಪಾಜೆ, ತೊಡಿಕಾನ ಗ್ರಾಮಗಳನ್ನು ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ.

ಕಸ್ತೂರಿ ರಂಗನ್ ವರದಿಯನ್ನು ಅನುಷ್ಟಾನಗೊಳಿಸಿದರೆ ಈ ಹಳ್ಳಿಗರ ಅಭಿವೃದ್ಧಿಗೆ ಹಿನ್ನಡೆ ಆಗುವ ಅಪಾಯವಿದೆ. ವರದಿಯಲ್ಲಿ ಹೇಳಿರುವಂತೆ ಕನಿಷ್ಠ ಮೂಲಭೂತ ಸೌಕರ್ಯಗಳಿಂದಲೂ ವಂಚಿತವಾಗುವ ಅಪಾಯವಿದ್ದು, ಇದೇ ಕಾರಣಕ್ಕೆ ಜನರು ಈ ವರದಿಯನ್ನು ವಿರೋಧಿಸುತ್ತಿದ್ದಾರೆ.

Leave a Comment

Your email address will not be published. Required fields are marked *