ಮಂಡ್ಯ ಜಿಲ್ಲೆ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಇಂದು ಮೈಸೂರು, ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಆಶೀರ್ವಾದ ಪಡೆದರು.

Ad Widget ... ..

ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನ ಹೆಚ್​​​​ಎಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ‌ ಬೆಳಗ್ಗೆ 9.20ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. ರಸ್ತೆ ಮೂಲಕ ಬೆಳಗ್ಗೆ 9.45ಕ್ಕೆ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ವಿಶೇಷ ಪೂಜೆ ಸಲ್ಲಿಸಿದರು.

Ad Widget

ಈ ವೇಳೆ ಅರ್ಚನೆಯನ್ನು ಮಾಡಿಸಿದರು. ಸಚಿವರಾದ ಗೋವಿಂದ ಕಾರಜೋಳ್ , ಎಸ್ ಟಿ ಸೋಮಶೇಖರ್ ಮತ್ತು ಇತರರು ಉಪಸ್ಥಿತರಿದ್ದರು.

ನಂತರ ರಸ್ತೆ ಮೂಲಕ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಬೆಳಗ್ಗೆ 11ಕ್ಕೆ ಜಿಲ್ಲೆ ಹೆಚ್​ಡಿ‌ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದರು.

Leave a Comment

Your email address will not be published. Required fields are marked *