Ad Widget .

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು

ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ.

Ad Widget . Ad Widget .

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .


ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳಾಗಿದ್ದಾರೆ. ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ ಕುಸಿದಿದೆ. ಉಳಿದ ನಾಲ್ಕು ಕಾರ್ಮಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ.

Leave a Comment

Your email address will not be published. Required fields are marked *