ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ| ಶೇ.39.59 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಜುಲೈ 21ರಂದು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

Ad Widget ... ..

2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

Ad Widget

ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಜು.21ರ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ (https://karresults.nic.in/ ) ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

Leave a Comment

Your email address will not be published. Required fields are marked *