Ad Widget .

ಸುರತ್ಕಲ್ : ಬೈಕ್ ಸವಾರನ‌ ಮೇಲೆ ಹರಿದ ಲಾರಿ| ಸ್ಥಳದಲ್ಲೇ ಯುವಕ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಮೃತ ದುರ್ದೈವಿ.

Ad Widget . Ad Widget .

ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ಮಾಹಿತಿ ತಿಳಿದ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ಸಂಬಂಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *