Ad Widget .

ಕೇರಳದಲ್ಲಿ ಪತ್ತೆಯಾಯ್ತು ಮತ್ತೊಂದು ಮಂಕಿಪಾಕ್ಸ್ ಪ್ರಕರಣ| ಕರ್ನಾಟಕದಲ್ಲಿ ಶುರುವಾಯ್ತು ಟೆನ್ಶನ್

ಸಮಗ್ರ ನ್ಯೂಸ್: ದೇಶದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲೇ ದೃಢಪಟ್ಟಿದ್ದು, ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. UAEಯಿಂದ ಮಲಪ್ಪುರಂಗೆ ಜುಲೈ 6ರಂದು ಹಿಂತಿರುಗಿದ್ದ ಕೇರಳದ 35 ವರ್ಷದ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.

Ad Widget . Ad Widget .

ಈ ಕುರಿತು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಸಹ ಕೇರಳದಲ್ಲಿಯೇ ಭಾರತದ ಮೊದಲ ಎರಡು ಮಂಕಿಪಾಕ್ಸ್ ಪ್ರಕರಣಗಳು ದೃಢಪಟ್ಟಿದ್ದವು. ಇದೀಗ 3ನೇ ಪ್ರಕರಣವೂ ಕೇರಳದಲ್ಲೇ ಖಚಿತಪಟ್ಟಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.

Ad Widget . Ad Widget .

ನೆರೆಯ ರಾಜ್ಯ ಕೇರಳದಲ್ಲಿ ‘ಮಂಕಿಪಾಕ್ಸ್’ ರೋಗದ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಕಣ್ಗಾವಲು ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸಿದೆ. ಅಲ್ಲದೇ ಕರ್ನಾಟಕ ರಾಜ್ಯದಲ್ಲಿ ತೀವ್ರ ನಿಗಾ ಇರಿಸಲು ನಿರ್ಧರಿಸಿದೆ.
ಮಂಕಿಪಾಕ್ಸ್​ಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಪ್ರಕಾರ ಪರಿಣಾಮಕಾರಿ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸೂಚನೆ ನೀಡಿದೆ.

Leave a Comment

Your email address will not be published. Required fields are marked *