ಸಮಗ್ರ ನ್ಯೂಸ್: ಹಾಡ ಹಗಲೇ ಗುತ್ತಿಗೆದಾರನ ಮೇಲೆ ದಾಳಿ ಮಾಡಿದ ಹಂತಕರು, ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಗುತ್ತಿಗೆದಾರನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರಿನ ಬಿಎಸ್ ಎನ್ ಎಲ್ ಕಚೇರಿಯ ಬಳಿಯಲ್ಲಿ ನಡೆದಿದೆ.
ಹಾಡಹಗಲೇ ಗುತ್ತಿಗೆದಾರ ಮೆಹಬೂಬ್ ಆಲಿ (30) ಎಂಬುವರನ್ನು ಹಂತಕರು ಮಚ್ಚಿನಿಂದ ಕೊಲೆ ಮಾಡಿ ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲಿಯೇ ನಡೆದ ಈ ಘಟನೆ ಕಂಡು ರಾಯಚೂರಿನ ಜನತೆ ಬೆಚ್ಚಿ ಬೀಳುವಂತೆ ಆಗಿದೆ.
ಈ ಹತ್ಯೆಯ ವಿಷಯ ತಿಳಿದು ಸ್ಥಳಕ್ಕೆ ರಾಯಚೂರಿನ ಸದರ್ ಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಈ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ಗುತ್ತಿಗೆದಾರನನ್ನು ಕೊಲೆ ಮಾಡಿ ಪರಾರಿಯಾಗಿರುವ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.