Ad Widget .

ಮಂಗಳೂರು: ಕಿಸ್ಸಿಂಗ್ ವಿಡಿಯೋ ಪ್ರಕರಣ; ಮತ್ತೆ 3 ವಿದ್ಯಾರ್ಥಿಗಳ ವಿಚಾರಣೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಾವುಟಗುಡ್ಡೆ ಸಮೀಪದ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ ಎನ್ನಲಾದ ವಿದ್ಯಾರ್ಥಿಗಳ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೆ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

Ad Widget . Ad Widget .

ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳು ಅಶ್ಲೀಲವಾಗಿ ವರ್ತಿಸಿದ್ದಲ್ಲದೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಕೃತ್ಯದಲ್ಲಿ ಹಲವರು ಭಾಗಿಯಾಗಿದ್ದು, 3 ಪೋಕ್ಸೊ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 8 ಮಂದಿಯನ್ನು ವಶಕ್ಕೆ ಪಡೆದಂತಾಗಿದೆ.

Ad Widget . Ad Widget .

ಪ್ರಕರಣ ಮಹಿಳಾ ಠಾಣೆಯಿಂದ ನಗರ ಅಪರಾಧ ಪತ್ತೆದಳ(ಸಿಸಿಬಿ)ಕ್ಕೆ ವರ್ಗಾವಣೆಯಾಗಿದ್ದು, ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *