ಸ್ಕಾರ್ಪಿಯೋ- ಲಾರಿ ನಡುವೆ ಭೀಕರ ಅಪಘಾತ| ಒಂದೇ ಕುಟುಂಬದ 5 ಮಂದಿ‌‌ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಲಾರಿ ಮತ್ತು ಸ್ಕಾರ್ಪಿಯೋ ನಡುವೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ‌ ಜಿಲ್ಲೆಯಲ್ಲಿ ‌ನಡೆದಿದೆ.

Ad Widget ... ..

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಸಮೀಪ ಟಾಟಾ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿಯಾಗಿ ಐವರುಉ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲ ಯಲಬುರ್ಗಾ ತಾಲೂಕಿನ ಬಿನ್ನಾಳ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *