Ad Widget .

ಅವಶ್ಯಕ ಔಷಧಗಳ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಜನಸಾಮಾನ್ಯರ ಕೆಲವು ಪ್ರಮುಖ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

Ad Widget . Ad Widget .

ಔಷಧಗಳ ಬೆಲೆ ಇಳಿಕೆ ಮಾಡುವ ಮೂಲಕ ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

Ad Widget . Ad Widget .

ಆಗಸ್ಟ್ 15 ರಿಂದ ಮಧುಮೇಹ, ಹೃದಯ ಸಂಬಂಧಿ ರೋಗಗಳು, ಕ್ಯಾನ್ಸರ್ ಮೊದಲಾದವುಗಳ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ.

ಕೇಂದ್ರ ರಸಾಯನಿಕ ಇಲಾಖೆ ಈ ಕುರಿತಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದು ಆಗಸ್ಟ್ 15 ರ ಸ್ವಾತಂತ್ರ್ಯೋತ್ಸವದಂದು ಅಧಿಕೃತ ಪ್ರಕಟಣೆ ಹೊರ ಬೀಳುವ ನಿರೀಕ್ಷೆ ಇದೆ.

ಕೆಲವು ಅಗತ್ಯ ಔಷಧಿಗಳ ಬೆಲೆ ಶೇಕಡ 70ರ ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಚರ್ಚಿಸಲು ಔಷಧ ಉದ್ಯಮದ ಪ್ರತಿನಿಧಿಗಳೊಂದಿಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಜುಲೈ 26ರಂದು ಸಭೆ ನಡೆಸಲಿದ್ದಾರೆ.

Leave a Comment

Your email address will not be published. Required fields are marked *