Ad Widget .

ಇಂದಿನಿಂದ ಮಹಾಭಾರತದಲ್ಲಿ ದ್ರೌಪದಿ ಯುಗ| ಪ್ರಮಾಣವಚನ ಸ್ವೀಕರಿಸಲಿದ್ದಾರೆ ಮುರ್ಮು

ಸಮಗ್ರ ನ್ಯೂಸ್: ರಾಮಾನಾಥ ಕೋವಿಂದ್ ಅವರ ಅಧಿಕಾರಾವಧಿ ಜು.24ಕ್ಕೆ ಅಂತ್ಯಗೊಂಡ ಕಾರಣ, ದೇಶದ 15ನೇ ರಾಷ್ಟ್ರಪತಿಯಾಗಿ, ಇಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಿ, ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget . Ad Widget .

ರಾಷ್ಟ್ರಪತಿ ಚುನಾವಣೆಯಲ್ಲಿ ಭಾರೀ ಬಹುತದೊಂದಿಗೆ ಎನ್ ಡಿಎ ಬೆಂಬಲಿತ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಗೆಲುವು ಸಾಧಿಸಿದ್ದರು. ಇಂತಹ ಅವರು ಇಂದು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Ad Widget . Ad Widget .

ಇಂದು ಬೆಳಿಗ್ಗೆ 10.15ಕ್ಕೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಈ ವೇಳೆ ಉಪಸ್ಥಿತರಿರಲಿದ್ದಾರೆ.

ಅಂದಹಾಗೇ 64 ವರ್ಷದ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಹುದ್ದೆಗೆ ಏರುತ್ತಿರುವಂತ ಮೊದಲ ಆದಿವಾಸಿ ಮಹಿಳೆಯಾಗಿದ್ದಾರೆ.

Leave a Comment

Your email address will not be published. Required fields are marked *