ಮಡಿಕೇರಿ: ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಹತ್ತನೇ ತರಗತಿ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿ ಎಂಬಲ್ಲಿ ನಡೆದಿದೆ.

Ad Widget ... ..

ಸುಂಟಿಕೊಪ್ಪ ಗ್ರಾಮದ ಸಮೀಪದ ಎಮ್ಮೆಗುಂಡಿ ತೋಟದ ಕಾರ್ಮಿಕ ಅಣ್ಣು ಅವರ ಪುತ್ರಿ ಹರ್ಷಿತಾ (16) ಮೃತ ವಿದ್ಯಾರ್ಥಿನಿ. ಈಕೆ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.

Ad Widget

ಹರ್ಷಿತಾ ನಿನ್ನೆ ಶಾಲೆಗೆ ಹೋಗದೇ ಓದಿಕೊಳ್ಳಲೆಂದು ತೋಟದ ಲೈನ್ ಮನೆಯಲ್ಲಿ ಉಳಿದುಕೊಂಡಿದ್ದಳು ಎನ್ನಲಾಗಿದೆ. ಮನೆಯವರು ಕೆಲಸಕ್ಕೆ ಹೋಗಿದ್ದು, ಸಂಜೆ ಹಿಂತಿರುಗಿ ಬಂದು ನೋಡಿದಾಗ ಮನೆಯೊಳಗೆ ವೇಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಕಂಡುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Comment

Your email address will not be published. Required fields are marked *