Ad Widget .

ಬೆತ್ತಲೆ‌ ಫೋಟೋಶೂಟ್; ಬಾಲಿವುಡ್ ನಟ ರಣ್ವೀರ್ ಸಿಂಗ್ ಮೇಲೆ ಕೇಸ್ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್ ಖ್ಯಾತ ನಟ, ಕರ್ನಾಟಕದ ಅಳಿಯ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿಗೆ ಕಾರಣವಾಗಿದ್ದರು. ಸದಾ ಮೈ ತುಂಬಾ ಬಟ್ಟೆ ಹಾಕಿಕೊಂಡು ಓಡಾಡುತ್ತಿದ್ದ ರಣವೀರ್, ಇದ್ದಕ್ಕಿದ್ದಂತೆಯೇ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡು ಕುತೂಹಲಕ್ಕೂ ಕಾರಣವಾಗಿದ್ದರು.

Ad Widget . Ad Widget .

ಈ ಕಾರಣಕ್ಕಾಗಿ ಇದೀಗ ಅವರ ಮೇಲೆ ದೂರು ದಾಖಲಾಗಿದೆ. ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು, ಸಮಾಜ ಸ್ವಾಸ್ತ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget . Ad Widget .

ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ದೂರು ದಾಖಲಿಸಲಾಗಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ನಟರು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಫೌಂಡೇಶನ್ ಆಗ್ರಹಿಸಿದೆ. ಕ್ರಮ ತಗೆದುಕೊಳ್ಳುವ ಮೂಲಕ ನಟರಿಗೆ ಸ್ಪಷ್ಟ ಸಂದೇಶವನ್ನು ನೀಡಬೇಕು ಎಂದು ಪೊಲೀಸ್ ಇಲಾಖೆಗೆ ಅದು ಮನವಿ ಮಾಡಿದೆ.

ರಣವೀರ್ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು ಕೂಡ ರಣವೀರ್ ಸಿಂಗ್ ಈ ರೀತಿಯಲ್ಲಿ ಕಾಣಿಸಿಕೊಳ್ಳಬಾರದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಸ್ವತಃ ಪತ್ನಿ ದೀಪಿಕಾ ಪಡುಕೋಣೆ ಕೂಡ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *