Ad Widget .

“ಡೋಂಗಿ, ಡೋಂಗಿ” ಬಿಜೆಪಿ ನಾಯಕರ ವಿರುದ್ದ ಭುಗಿಲೆದ್ದ ಆಕ್ರೋಶ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು.

Ad Widget . Ad Widget .

ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ಮೃತದೇಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ‘ಡೋಂಗಿ ಡೋಂಗಿ’ ಎಂದು ಧಿಕ್ಕಾರ ಕೂಗಿದರು.

Ad Widget . Ad Widget .

ಕಾರ್ಯಕರ್ತರ ಆಕ್ರೋಶಕ್ಕೆ ಕಂಗಾಲಾದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು. ಬಿಜೆಪಿ ಹಾಗೂ ಸಂಘಪರಿವಾರದ ಹಲವು ನಾಯಕರು ಕಾರ್ಯಕರ್ತರನ್ನು ಸಮಾಧಾನಿಸಿದರೂ ಹಲವು ಕಾರ್ಯಕರ್ತರು ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ, ಸಂಸದ ನಳಿನ್ ಕುಮಾರ್ ಸೇರಿದಂತೆ ಸಚಿವರು ಕಾರ್ಯಕರ್ತರನ್ನು ಸಮಾಧಾನಿಸಲು ಯತ್ನಿಸಿದರೂ ಕೇಳದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ ಕೂಗಿದರು. ಪೊಲೀಸರು ಸಹ ಯಾರನ್ನು ಸಮಾಧಾನಿಸಲು ಯತ್ನಿಸಿದರೂ ಯಾರು ಕೇಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *