Ad Widget .

ಮನೆಯ ಕನಸನ್ನು ನುಚ್ಚುನೂರುಗೊಳಿಸಿದ ದುಷ್ಕರ್ಮಿಗಳು| ಗೃಹನಿರ್ಮಾಣಕ್ಕೆ ಮಾಡಿದ ಜಾಗದಲ್ಲೇ ಹೊತ್ತಿ‌ಉರಿದ ಪ್ರವೀಣ್ ಚಿತೆ|

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಪ್ರವೀಣ್‌ ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ನೆರವೇರಿಸಲಾಗಿದೆ. ಈ ವೇಳೆ ನೆರೆದಿದ್ದ ಸಾವಿರಾರು ಮಂದಿ ತಮ್ಮ ಅಂತಿಮ ನಮನ ಸಲ್ಲಿಸಿದ್ದಾರೆ.

Ad Widget . Ad Widget .

ಮೂರು ವರ್ಷಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಪ್ರವೀಣ್‌ ನೆಟ್ಟಾರು, ಸುಂದರವಾದ ಮನೆಯೊಂದನ್ನು ಕಟ್ಟಿಸಿಕೊಳ್ಳಲು ಚಿಂತನೆ ನಡೆಸಿದ್ದು, ಇದಕ್ಕಾಗಿ ತಮ್ಮ ಜಾಗವನ್ನು ಸಮತಟ್ಟುಗೊಳಿಸಿದ್ದರು ಎನ್ನಲಾಗಿದೆ. ಇದೀಗ ಅದೇ ಜಾಗದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

Ad Widget . Ad Widget .

ಪ್ರವೀಣ್‌ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಅವರು ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಇದರ ಮಧ್ಯೆ ಉದಯಪುರದಲ್ಲಿ ಹತ್ಯೆಗೀಡಾದ ಕನ್ಹಯ್ಯ ಲಾಲ್ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಖಂಡಿಸಿದ್ದ ಪ್ರವೀಣ್‌, ಈ ಕೃತ್ಯವನ್ನು ನೀವೇಕೆ ಪ್ರಶ್ನಿಸುವುದಿಲ್ಲವೆಂದು ಕೆಲವೊಬ್ಬರ ಹೆಸರನ್ನು ಪ್ರಸ್ತಾಪಿಸಿ ಬರೆದುಕೊಂಡಿದ್ದರು. ಈ ಪೋಸ್ಟ್‌ ಈಗ ವೈರಲ್‌ ಆಗಿದೆ.

Leave a Comment

Your email address will not be published. Required fields are marked *