ಸಮಗ್ರ ನ್ಯೂಸ್: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿ ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ. ಫಾಝಿಲ್ ಎಂಬಾತನ ಮೇಲೆ ಹಲ್ಲೆ ನಡೆದಿದೆ.

ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಆದರೆ ಗಾಯಾಳು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.