ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಜಾಕಿರ್ ಹಾಗೂ ಮೊಹಮ್ಮದ್ ಶಪೀಕ್ ಎಂದು ಗುರುತಿಸಲಾಗಿದೆ. ಬೆಳ್ಳಾರೆಯಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಅಲೋಕ್ ಕುಮಾರ್ ಈ ವಿಷಯ ತಿಳಿಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಕಾಸರಗೋಡಿನಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು ಇವರು ಬೆಳ್ಳಾರೆ ಹಾಗೂ ಸವಣೂರು ಮೂಲದವರು ಎಂದು ಹೇಳಲಾಗಿದೆ.
ಇದುವರೆಗೆ 21 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಇರುವ ಕಾರಣ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.