Ad Widget .

ಪ್ರವೀಣ್ ಹತ್ಯೆ ‌ಪ್ರಕರಣ; ಮೂರನೇ ಆರೋಪಿ ಪೊಲೀಸ್ ವಶ

ಸಮಗ್ರ‌ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಕಳೆದ ಜುಲೈ 26ರಂದು ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದು, ಕಾಣಿಯೂರಿನಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ.

Ad Widget . Ad Widget .

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ನಿನ್ನೆ ಸಂಜೆಯೇ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *