Ad Widget .

ಫಾಝಿಲ್ ಹತ್ಯೆ ಪ್ರಕರಣ| ನಿಷೇದಾಜ್ಞೆ ಇರುವ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸದಿರಲು ಪೊಲೀಸ್ ‌ಮನವಿ

ಸಮಗ್ರ ನ್ಯೂಸ್: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ.

Ad Widget . Ad Widget .

ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಇರುವ ಸೂಕ್ಷ್ಮ ಪ್ರದೇಶಗಳ ಮಸೀದಿಗಳಲ್ಲಿ ಇಂದು ಪ್ರಾರ್ಥನೆ ಬೇಡ ಎಂದು ಮುಸ್ಲಿಮರಿಗೆ ಪೊಲೀಸರು ಮನವಿ ಮಾಡುತ್ತಿದ್ದಾರೆ. ಮನೆಗಳಲ್ಲಿ ಅಥವಾ ನಿಷೇಧಾಜ್ಞೆ ಇಲ್ಲದ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಿ ಪ್ರಾರ್ಥನೆ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ.

Ad Widget . Ad Widget .

ಫಾಜಿಲ್​ ಮಂಗಲಪೇಟೆ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಸುರತ್ಕಲ್​, ಮುಲ್ಕಿ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವ್ಯಾಪಕ ಪೊಲೀಸ್ ಬಂದೋಬಸ್ತ್​ ಹಾಕಲಾಗಿದ್ದು, ಸುರತ್ಕಲ್​ನ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿರಂತರ ಗಸ್ತು ತಿರುಗುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Leave a Comment

Your email address will not be published. Required fields are marked *