Ad Widget .

ಮಂಗಳೂರು:ಕೊಲೆ ಕೃತ್ಯ ಹಿನ್ನಲೆ; ಜಿಲ್ಲೆಯ ಈ ಶಾಲಾ ಕಾಲೇಜುಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಎರಡು ದಿನಗಳಲ್ಲೇ ಮತ್ತೊಂದು ನೆತ್ತರು ಹರಿದಿದೆ. ಕಳೆದ ರಾತ್ರಿ ಸುರತ್ಕಲ್ ನಲ್ಲಿ ಮತ್ತೋರ್ವ ಯುವಕ ಫಾಜಿಲ್ ಹತ್ಯೆಯಾಗಿದ್ದು, ಕರಾವಳಿಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

Ad Widget . Ad Widget .

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ‌ ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget .

ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಜಪೆ, ಸುರತ್ಕಲ್‌, ಮೂಲ್ಕಿ, ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29)ರಜೆಯನ್ನು ಘೋಷಣೆ ಮಾಡಲಾಗಿದೆ. ಫಾಜಿಲ್‌ ಹಂತಕರಿಗಾಗಿ ಪೊಲೀಸರು ಹುಡುಕಾಟವನ್ನು ಆರಂಭಿಸಿದ್ದು, ಯಾವುದೇ ವದಂತಿಗಳಿಗೆ ಜನರು ಕಿವಿಗೊಡಬಾರದು ಎಂದು ಆಯುಕ್ತರು ಮನವಿಯನ್ನು ಮಾಡಿದ್ದಾರೆ.

Leave a Comment

Your email address will not be published. Required fields are marked *