Ad Widget .

ರಾಜಕೀಯ ಒತ್ತಡಕ್ಕೆ ಮಣಿದು‌ ಪೊಲೀಸರು ಅಮಾಯಕರನ್ನು ಬೇಟೆಯಾಡುತ್ತಿದ್ದಾರೆ – ಪಿಎಫ್ಐ ಆರೋಪ

ಸಮಗ್ರ ನ್ಯೂಸ್: ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆಘಟನೆಗೆ ಸಂಬಂಧಿಸಿದಂತೆ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ನಡೆಸುತ್ತಿರುವ ಬಂಧನ ಕಾರ್ಯಾಚರಣೆ ಖಂಡನಾರ್ಹವಾಗಿದೆ. ಬಿಜೆಪಿ ಸರಕಾರದ ಒತ್ತಡದಲ್ಲಿ ಪೊಲೀಸರು ಅಮಾಯಕರ ಬೇಟೆಯಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಪಾಪ್ಯುಲರ್ ಫ್ರಂಟ್‌ ಆರೋಪಿಸಿದೆ.

Ad Widget . Ad Widget .

ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ‌ ಪಿಎಫ್ಐ ಸಂಘಪರಿವಾರದ ಯಾವುದೇ ಕಾರ್ಯಕರ್ತರ ಹತ್ಯೆಗಳು ನಡೆದಾಗಲೂ ಬಿಜೆಪಿ ಸಂಸದರು, ಸಚಿವರು ಗೊಂದಲಕಾರಿ ಹೇಳಿಕೆಗಳನ್ನು ನೀಡುವುದು, ಪಾಪ್ಯುಲರ್ ಫ್ರಂಟ್ ಮೇಲೆ ಆರೋಪ ಹೊರಿಸುವುದು, ನಂತರ ಜಿಲ್ಲೆಯ ಪೊಲೀಸರುಅಮಾಯಕ ಮುಸ್ಲಿಮ್ ಯುವಕರನ್ನು ರಾತ್ರೋರಾತ್ರಿ ವಿಚಾರಣೆಯ ನೆಪದಲ್ಲಿ ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸುವುದು ಸಾಮಾನ್ಯವಾಗಿದೆ.

Ad Widget . Ad Widget .

ಘಟನೆ ನಡೆದ ಮರುಕ್ಷಣದಲ್ಲಿ, ವಿಶೇಷವಾಗಿ ಪೊಲೀಸರ ಪ್ರಾಥಮಿಕ ತನಿಖೆ ಪೂರ್ಣಗೊಳ್ಳುವ ಮುನ್ನವೇ ಬಿಜೆಪಿ ನಾಯಕರು ದ್ವೇಷದ ಹೇಳಿಕೆ ನೀಡಿ ಪರಿಸ್ಥಿತಿಯನ್ನು ಪ್ರಕ್ಷ್ಯುಬ್ಧಗೊಳಿಸಿಬಿಡುತ್ತಾರೆ. ನಂತರ ಪೊಲೀಸರತನಿಖೆಯೂರಾಜಕೀಯಪ್ರೇರಿತವಾಗಿಯೇ ಸಾಗುತ್ತದೆ. ಸುಳ್ಯದ ಘಟನೆಯಲ್ಲಂತೂ ಸ್ವಪಕ್ಷೀಯ ಕಾರ್ಯಕರ್ತರೇ ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸರಕಾರದ ಗಂಭೀರ ಆಡಳಿತ ವೈಫಲ್ಯ ಮುಚ್ಚಿಹಾಕಲು ಮತ್ತು ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರ ಆಕ್ರೋಶವನ್ನು ಹೇಗಾದರೂ ತಣಿಸುವುದು ಬಿಜೆಪಿಗೆ ಅಗತ್ಯವಾಗಿ ಬಿಟ್ಟಿದೆ.

ಸುಳ್ಯದಲ್ಲಿ ನಡೆದ ಹತ್ಯೆಘಟನೆ ಬಳಿಕ ಬಿಜೆಪಿಯ ಶವ ರಾಜಕೀಯವನ್ನು ಟೀಕಿಸಿ ಹಿಂದುಗಳಿದ ವರ್ಗಗಳ ನಾಯಕರ ಜಾಗೃತಿ ಮೂಡಿಸುವ ಹಲವಾರು ವೀಡಿಯೋಗಳು ಸಾಮಾಜಿ ಕಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದೆಲ್ಲವೂ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಮುಳುವಾಗಿ ಪರಿಣಮಿಸಲಿದೆ ಎಂಬುದು ಮನವರಿಕೆಯಾಗಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಸೂಚನೆಯ ಮೇರೆಗೆ ತರಾತುರಿಯಲ್ಲಿ ವಿಚಾರಣೆಯ ನೆಪದಲ್ಲಿ ಕೊಂಡೊಯ್ದು ಘಟನೆಯಲ್ಲಿ ಅಮಾಯಕರನ್ನು ಸಿಲುಕಿಸುತ್ತಿರುವುದು ಬಹಳ ಸ್ಪಷ್ಟವಾಗುತ್ತಿದೆ ಎಂದು ಪಿಎಫ್ಐ ಹೇಳಿದೆ.

ಸುಳ್ಯ ಘಟನೆಗೆ ಸಂಬಂಧಿಸಿ ಬಂಧಿತರಾಗಿರುವ ಯುವಕರ ಕುಟುಂಬಸ್ಥರ ಹೇಳಿಕೆಗಳೂ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಪೊಲೀಸರತನಿಖೆಯನ್ನೇ ಸಂಶಯದಿಂದ ನೋಡುವಂತೆ ಮಾಡಿದೆ. ಅವರ ಅಮಾಯಕತೆ ಅವರ ಮಾತುಗಳಲ್ಲೇ ವ್ಯಕ್ತವಾಗುತ್ತದೆ. ಬಂಧಿತ ಇಬ್ಬರು ಯುವಕರೂ ಅಮಾಯಕರಾಗಿದ್ದು, ಪೊಲೀಸರು ರಾಜಕೀಯ ಪ್ರೇರಿತವಾಗಿ ತನಿಖೆ ನಡೆಸುವುದನ್ನುಕೂಡಲೇ ನಿಲ್ಲಿಸಬೇಕು ಎಂದು ಪಿಎಫೈ ನಾಯಕರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *