ಪ್ರಮೋದ್ ಮುತಾಲಿಕ್ ನ ಅರೆಸ್ಟ್ ಮಾಡಿದ ಪೊಲೀಸರು| ದ.ಕ ಪ್ರವೇಶಿಸದಂತೆ ತಡೆ

ಸಮಗ್ರ ನ್ಯೂಸ್: ಪ್ರವೀಣ್ ಹತ್ಯೆ ಬೆನ್ನಲ್ಲೆ ಮುಂಜಾಗೃತಾ ಕ್ರಮವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಆದರೂ ಮುತಾಲಿಕ್ ಇಂದು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದು, ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಪ್ರಮೋದ್ ಮುತಾಲಿಕ್ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು, ಪ್ರಮೋದ್ ಮುತಾಲಿಕ್ ಪ್ರವೀಣ್ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ಹಿನ್ನಲೆ ಪೊಲೀಸ್ ಇಲಾಖೆ ಮನವಿ ಮೇರೆಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.

Ad Widget

ಆದರೆ ಪ್ರಮೋದ್ ಮುತಾಲಿಕ್ ಇಂದು ಉಡುಪಿ ಜಿಲ್ಲೆ ಮೂಲಕ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಲು ಯತ್ನಿಸಿದ್ದರು, ಆದರೆ ಪೊಲೀಸರು ಹೆಜಮಾಡಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ತಡೆದು ವಶಕ್ಕೆ ಪಡೆದಿದ್ದು ಅವರನ್ನು ಉಡುಪಿ ಜಿಲ್ಲೆಗೆ ಬಿಟ್ಟು ಬರಲಾಗಿದೆ.

Leave a Comment

Your email address will not be published. Required fields are marked *