“ಎಚ್ಚರದಿಂದಿರಿ, ಒಬ್ಬೊಬ್ಬರೇ ಸುತ್ತಾಡಬೇಡಿ” – ಉಡುಪಿ ಎಸ್.ಪಿ ಸೂಚನೆ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ.

Ad Widget ... ..

ಕೊಲೆ ನಡೆದಿರುವುದರಿಂದ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಮತ್ತು ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಯ ಪ್ರಮುಖರು ಎಚ್ಚರದಿಂದಿರುವಂತೆ ಮತ್ತು ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ನೀಡಲಾಗಿದೆ.

Ad Widget

ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಸೂಕ್ಷ್ಮ ಪ್ರದೇಶ, ಚೆಕ್ ಪೋಸ್ಟ್‌ಗಳಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸಾರ್ವಜನಿಕರು ಈ ಬಗ್ಗೆ ಯಾವುದೆ ಮಾಹಿತಿ ಇದ್ದರೂ ಪೊಲೀಸ್ ಇಲಾಖೆಗೆ ನೀಡಬಹುದು ಎಂದು ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *