Ad Widget .

ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರಿಂದ ಹೋಂ ಮಿನಿಸ್ಟರ್ ಮನೆಗೆ ಮುತ್ತಿಗೆ

ಬೆಂಗಳೂರು: ಪ್ರವೀಣ್ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಹೋಂ ಮಿನಿಸ್ಟರ್ ಮನೆಗೆ ಮುತ್ತಿಗೆ ಹಾಕಿದ ಘಟನೆ ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿ ಜು.30 ರಂದು ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ಮೊನ್ನೆಯಷ್ಟೇ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಮತ್ತೊಂದು ಸಂಘಟನೆಯೇ ಸಿಡಿದೆದ್ದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಗೃಹ ಇಲಾಖೆಯನ್ನು ನಿಭಾಯಿಸುವುದರಲ್ಲಿ ಆರಗ ಜ್ಞಾನೇಂದ್ರ ಅವರು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ

Ad Widget . Ad Widget . Ad Widget .

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗಿದ್ದಾರೆ. ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ಎಬಿವಿಪಿ ಕಾರ್ಯಕರ್ತರು ಗೇಟ್ ಹಾರಿ ಗೃಹ ಸಚಿವರ ನಿವಾಸಕ್ಕೆ ನುಗ್ಗಿದ್ದಾರೆ.

ಈ ವೇಳೆ ಅಲ್ಲಿದ್ದ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ಬಾಗಿಲ ಬಳಿ ತಡೆದಿದ್ದಾರೆ. ಆದರೆ ಪೊಲೀಸರ ಮಾತಿಗೆ ಜಗ್ಗದ ಎಬಿವಿಪಿ ಕಾರ್ಯಕರರ್ತರು ಮನೆಯೊಳಗೆ ನುಗ್ಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ವಿಬಿವಿಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ಇದ್ದಾರೆ.

Leave a Comment

Your email address will not be published. Required fields are marked *