ಪ್ರವೀಣ್ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ; 5 ದಿನ ವಿಚಾರಣೆಗಾಗಿ ಗೌಪ್ಯ ಸ್ಥಳಕ್ಕೆ ಆರೋಪಿಗಳು

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Ad Widget ... ..

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಝಾಕಿರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.

Ad Widget

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಕಸ್ಟಡಿಗೆ ಪಡೆದ ಪೊಲೀಸರು ಇದೀಗ ಆರೋಪಿಗಳನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿರುವುದಾಗಿ‌ ತಿಳಿದುಬಂದಿದೆ.

Leave a Comment

Your email address will not be published. Required fields are marked *