Ad Widget .

ಫಾಝಿಲ್ ಹತ್ಯೆ ಪ್ರಕರಣ| ಕೃತ್ಯಕ್ಕೆ ಬಳಸಿದ್ದ ಕಾರು‌ ಮತ್ತು ಚಾಲಕ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರಿನ ಸುರತ್ಕಲ್ ನ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಫಾಜಿಲ್ ಮೇಲೆ ದಾಳಿ ವೇಳೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಅಜಿತ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Ad Widget . Ad Widget .

ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಫಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಇದೀಗ ಹಂತಕರು ಬಳಸಿದ್ದ ಕಾರು ಪತ್ತೆಯಾಗಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ.

ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಶೀಘ್ರ ಬಂಧನ ಪ್ರಕ್ರಿಯೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಶಯದ ಮೇರೆಗೆ ಮೊದಲು 21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿ ವಶಕ್ಕೆ ಪಡೆದವರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಆರೋಪಿ ಗಳ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *