Ad Widget .

ದ.ಕ ದಲ್ಲಿ ಮತ್ತೆರಡು ದಿನ ನಿರ್ಬಂಧ ವಿಸ್ತರಣೆ;

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದೆ.

Ad Widget . Ad Widget .

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಆಗಸ್ಟ್ 1 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿತ್ತು. ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಅನುಗುಣವಾಗಿ ಈಗ ಆಗಸ್ಟ್ 3 ರವರೆಗೆ ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

Ad Widget . Ad Widget .

ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.

Leave a Comment

Your email address will not be published. Required fields are marked *