ಸಮಗ್ರ ನ್ಯೂಸ್: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಇಯಾನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ರವಿವಾರ ಇನ್ನಾ ಗ್ರಾಮದ ಸ್ಥಳೀಯರು ಕಾರನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕಾರು ಕಳೆದ ಮೂರು ದಿನದಿಂದ ಇನ್ನಾ ಗ್ರಾಮದ ಉಕ್ಕುಡ ಎಂಬಲ್ಲಿ ನಿಂತಿತ್ತು. ಇಂದು ಮಂಗಳೂರು ಪೊಲೀಸರಿಗೆ ಸ್ಥಳೀಯರು ಮೆಸೇಜ್ ಮಾಡಿ ಮಾಹಿತಿ ನೀಡಿದ್ದಾರೆ.
ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಇದು ಫಾಝಿಲ್ ಕೊಲೆ ಕೃತ್ಯದಲ್ಲಿ ಬಳಸಿದ ಕಾರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.