Ad Widget .

ಸುಳ್ಯ: ಅಕ್ರಮವಾಗಿ ಮರದ ದಿಮ್ಮಿ ಸಾಗಾಟ| ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರ ವಿರುದ್ಧ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget . Ad Widget .

ಪರವಾನಿಗೆ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮಹಮ್ಮದ್ ಶಫೀಕ್ ಅಡ್ಕಾರ್, ಸುಂದರ್ ಅಡ್ಕಾರ್, ಫೈಝಲ್ ಅಡ್ಕಾರ್ ಎಂಬುವವರನ್ನು ವಶಕ್ಕೆ ಪಡೆದಿದ್ದು, ಈ ಮೂವರ ಹೇಳಿಕೆಯ ಆಧಾರದ ಮೇರೆಗೆ ಪ್ರಮುಖ ಆರೋಪಿ ಅಬ್ದುಲ್ ಮಜೀದ್ ನಡುವಡ್ಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget . Ad Widget .

ಆರೋಪಿಗಳು ಸುಳ್ಯದ ಅಜ್ಜಾವರ ಗ್ರಾಮದ ಮುಂಡೋಳಿಮೂಲೆ ಸಮೀಪದಿಂದ ಹಲಸಿನ ಮರದ ದಿಮ್ಮಿಗಳನ್ನು ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದರು. ರಾತ್ರಿವೇಳೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮುಳ್ಯ ಕಜೆ ಎಂಬಲ್ಲಿ ಆರೋಪಿಗಳನ್ನು ಹಾಗೂ ಅವರು ಸಾಗಿಸುತ್ತಿದ್ದ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *