Ad Widget .

ಮಂಗಳೂರು: ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ರೆ ಬೀಳುತ್ತೆ ಕೇಸ್ – ಕಮಿಷನರ್ ಶಶಿಕುಮಾರ್ ಎಚ್ಚರಿಕೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ನಿಗಾ ವಹಿಸಲಾಗಿದ್ದು, ಈಗಾಗಲೇ 5 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂದು ಪ್ರಚೋದನಕಾರಿ ಹೇಳಿಕೆ ನೀಡುವುದು, ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿರುವವ ಮೇಲೆ ನಿಗಾ ವಹಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

Ad Widget . Ad Widget .

ಗುಂಪಿನಲ್ಲಿ ಗೋವಿಂದ ಅಂತ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ, ಸೇಡಿನ ಹೇಳಿಕೆ, ಸುಳ್ಳು ಸುದ್ದಿ ಹರಡಿಸುತ್ತಿರುವ ಮೇಲೆ ನಿಗಾ ವಹಿಸಲು 8 ಜನರ ತಂಡ ನಿಗಾ ವಹಿಸಿದೆ. ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕೆಲವು ವ್ಯಕ್ತಿಗಳು ಇದನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅವರೆಲ್ಲಾ ಶೀಘ್ರದಲ್ಲೇ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.

ವಾಟ್ಸಪ್ ಗ್ರೂಪ್ ಮಾಡುವುದು, ಸುಳ್ಳು ಸುದ್ದಿ ಹರಡುವುದು, ಡಿಜಿಟಲ್ ನ್ಯೂಸ್ ಕಂಟೆಂಟ್ ಮೇಲೆ ಕಮೆಂಟ್ ಮಾಡುವುದು ಈ ರೀತಿ ಪ್ರಚೋದನಕಾರಿ ಕೆಲಸಗಳನ್ನು ಮಾಡಲಾಗುತ್ತಿದೆ. ನಮ್ಮನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂಬ ಭಂಡ ಧೈರ್ಯದಿಂದ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

Leave a Comment

Your email address will not be published. Required fields are marked *