July 2022

ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದು; 13 ಜನರಿಗೆ ಗಾಯ

ಹೊಳೆಹೊನ್ನೂರು: ಸಮೀಪದ ಅರಹತೊಳಲಿನಲ್ಲಿ ಸೋಮವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದಿದ್ದು, 13 ಜನ ಗಾಯಗೊಂಡಿದ್ದಾರೆ. ಆ ಮನೆಯಲ್ಲಿ ನಾಲ್ಕೈದು ದಿನಗಳ ಹಿಂದೆ ವಿವಾಹ ಸಮಾರಂಭ ನಡೆದಿತ್ತು. ಮನೆಯಲ್ಲಿ ಮಲಗಿದ್ದ ಸಂಬಂಧಿಕರು ಹಾಗೂ ನವವಿವಾಹಿತನ ಮೇಲೆ ಮನೆಯ ಚಾವಣಿ ಕುಸಿದಿದೆ. ನವವಿವಾಹಿತ ಗಣೇಶ್ ಹಾಗೂ ಆತನ ಅಕ್ಕನ ಮಗನಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹೊಳೆ ಹೊನ್ನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್‍ನಾಯ್ಕ್, ಭದ್ರಾವತಿ ತಹಶೀಲ್ದಾರ್ […]

ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದು; 13 ಜನರಿಗೆ ಗಾಯ Read More »

ವಿದ್ಯುತ್ ಸ್ಪರ್ಶಿಸಿ ಗರ್ಭಿಣಿ ಕಾಡಾನೆ ಸಾವು

ಕೊಡಗು: ದಕ್ಷಿಣ ಕೊಡಗಿನ ಕುಟ್ಟ ಸಮೀಪದ ಮಂಚಳ್ಳಿ ಕೊರಿಯಮಲೆ ಬೆಟ್ಟದ ಬುಡದಲ್ಲಿರುವ ಬಲ್ಯಮಾಡ ದಿ ವಿಜಯ ಎಂಬವರ ತೋಟದಲ್ಲಿ 25 ವರ್ಷ ಪ್ರಾಯದ ಗರ್ಭಿಣಿ ಕಾಡಾನೆಯೊಂದು ವಿದ್ಯುತ್ ತಗುಲಿ ಮೃತಪಟ್ಟಿದೆ. ತೋಟದಲ್ಲಿದ್ದ ಅಡಿಕೆ ಮರವನ್ನು ಬುಧವಾರ ಬೆಳಗಿನ ಜಾವ ಎಳೆದು ತಿನ್ನುವ ಸಂದರ್ಭ ವಿದ್ಯುತ್ ಸ್ಪರ್ಶಗೊಂಡಿರುವುದಾಗಿ ಹೇಳಲಾಗಿದೆ.

ವಿದ್ಯುತ್ ಸ್ಪರ್ಶಿಸಿ ಗರ್ಭಿಣಿ ಕಾಡಾನೆ ಸಾವು Read More »

ಪೋಲಿಸ್ ನೇಮಕಾತಿ ಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್‌ಟೇಬಲ್ ಸಹಾಯಕ ವೈರ್‍ಲೆಸ್ ಅಪರೇಟರ್ (AWO)ಟೆಲಿ-ಪ್ರಿಂಟರ್ ಆಪರೇಟರ್ (TPO)} ಮತ್ತು ಕಾನ್ಸ್‌ಟೇಬಲ್ (ಚಾಲಕ-ಪುರುಷ) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‍ಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜು.29 ಕೊನೆಯ

ಪೋಲಿಸ್ ನೇಮಕಾತಿ ಗೆ ಅರ್ಜಿ ಆಹ್ವಾನ Read More »

ಪ್ರವೀಣ್ ಹತ್ಯೆ ಪ್ರಕರಣ; ಏಳು ಮಂದಿ ಶಂಕಿತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ವ್ಯಕ್ತಿಗಳನ್ನು ಬೆಳ್ಳಾರೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2022ರಂತೆ 302 ಜೊತೆಗೆ 34 ಐಪಿಸಿ ಅನ್ವಯ ಕೇಸು ದಾಖಲಿಸಿಕೊಳ್ಳಲಾಗಿದ್ದು ಇದೀಗ ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮೂವರ ವಿರುದ್ದ ಕೊಲೆ ಕೇಸು ದಾಖಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣ; ಏಳು ಮಂದಿ ಶಂಕಿತರು ಪೊಲೀಸ್ ವಶಕ್ಕೆ Read More »

ಪ್ರವೀಣ್ ಹತ್ಯೆ ಹಿನ್ನೆಲೆ: ಉದ್ವಿಗ್ನಗೊಂಡ ಕರಾವಳಿ| ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ದಕ್ಷಿಣ ಜಿಲ್ಲೆಯ ಪುತ್ತೂರು ಮತ್ತು ಕಡಬದಲ್ಲಿ ಬಿಗುವಿನ ವಾತಾವರಣವಿದೆ. ಪುತ್ತೂರಿನಲ್ಲಿ ಕೆಲವರು ಸರ್ಕಾರಿ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.‌ ಪರಿಸ್ಥಿತಿ ಕೈ ಮೀರದಂತೆ ಮೂರೂ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಕೆಲವು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಘಟನೆಯ ನಂತರ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ

ಪ್ರವೀಣ್ ಹತ್ಯೆ ಹಿನ್ನೆಲೆ: ಉದ್ವಿಗ್ನಗೊಂಡ ಕರಾವಳಿ| ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ Read More »

ಪ್ರವೀಣ್ ಹತ್ಯೆ ಖಂಡಿಸಿ ಸುಳ್ಯ ಉದ್ವಿಗ್ನ; ಟಯರ್‌ಗೆ ಬೆಂಕಿ ಹಚ್ಚಿ‌ ಆಕ್ರೋಶ; ಪೊಲೀಸರೊಂದಿಗೆ ಮಾತಿನ ಚಕಮಕಿ

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದ.ಕ ಜಿಲ್ಲೆ ಉದ್ವಿಗ್ನಗೊಂಡಿದ್ದು, ಬಿಗುವಿನ ವಾತಾವರಣ ಕಂಡುಬಂದಿದೆ. ಸುಳ್ಯದಲ್ಲಿ ಸಂಘಟನೆಗಳ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ನಗರದಲ್ಲಿ ಎಲ್ಲಾ ಅಂಗಡಿಗಳನ್ನು ಮುಚ್ಚಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮುಂಜಾಗ್ರತಾ ಕ್ರಮವಾಗಿ‌ ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.

ಪ್ರವೀಣ್ ಹತ್ಯೆ ಖಂಡಿಸಿ ಸುಳ್ಯ ಉದ್ವಿಗ್ನ; ಟಯರ್‌ಗೆ ಬೆಂಕಿ ಹಚ್ಚಿ‌ ಆಕ್ರೋಶ; ಪೊಲೀಸರೊಂದಿಗೆ ಮಾತಿನ ಚಕಮಕಿ Read More »

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಉದ್ವಿಗ್ನ

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ Read More »

ಸುಳ್ಯ: ಪ್ರವೀಣ್ ಹತ್ಯೆಗೆ ಮುಂಜಾನೆಯಿಂದಲೇ ನಡೆಯುತ್ತಿತ್ತಾ ಪ್ರಿಪರೇಶನ್?| ಬೈಕ್ ನಲ್ಲಿ ಸುತ್ತಾಡಿದ್ದರಾ ದುಷ್ಕರ್ಮಿಗಳು?

ಸಮಗ್ರ ನ್ಯೂಸ್: ಮಂಗಳವಾರ ತಡರಾತ್ರಿ ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿಗಳು ಬಯಲಾಗುತ್ತಿವೆ. ಪ್ರವೀಣ್ ಹತ್ಯಗೆ ದುಷ್ಕರ್ಮಿಗಳು ಮೊದಲೇ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾದ ಮಾಹಿತಿ ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಪ್ರವೀಣ್ ತನ್ನ ಕೋಳಿ ಅಂಗಡಿ ಬಾಗಿಲು ಹಾಕುವುದನ್ನೇ ಹೊಂಚು ಹಾಕಿ‌ ಕಾದು‌ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿದ್ದಾರೆ‌. ದುಷ್ಕರ್ಮಿಗಳು KL1678 ಸಂಖ್ಯೆಯ splendor ಬೈಕ್‌ ನಲ್ಲಿ‌ ಬಂದಿದ್ದರು ಎನ್ನಲಾಗಿದೆ. ಅದೇ ಬೈಕ್ ನಲ್ಲಿ‌ ನಿನ್ನೆ

ಸುಳ್ಯ: ಪ್ರವೀಣ್ ಹತ್ಯೆಗೆ ಮುಂಜಾನೆಯಿಂದಲೇ ನಡೆಯುತ್ತಿತ್ತಾ ಪ್ರಿಪರೇಶನ್?| ಬೈಕ್ ನಲ್ಲಿ ಸುತ್ತಾಡಿದ್ದರಾ ದುಷ್ಕರ್ಮಿಗಳು? Read More »

ಪುತ್ತೂರು ಉದ್ವಿಗ್ನ; ಬಸ್ ಗೆ ಕಲ್ಲೆಸೆತ

ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ಹತ್ಯೆಯಿಂದ ಪುತ್ತೂರು ತಾಲೂಕು ಉದ್ವಿಗ್ನಗೊಂಡಿದೆ. ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಕಿಡಿಗೇಡಿಗಳು ಸರ್ಕಾರಿ ಬಸ್ಸೊಂದಕ್ಕೆ ಕಲ್ಲೆಸೆದು ವಿಕೃತಿ ಮೆರೆದಿದ್ದಾರೆ. ಮಂಗಳೂರಿಗೆ ಹೋಗುವ ಬಸ್ ಗೆ ಕಲ್ಲೆಸೆದು ಗಾಜು ಪುಡಿಯಾಗಿದೆ.

ಪುತ್ತೂರು ಉದ್ವಿಗ್ನ; ಬಸ್ ಗೆ ಕಲ್ಲೆಸೆತ Read More »

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್ Read More »