ಪುತ್ತೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ಹತ್ಯೆ ಪ್ರಕರಣ| ತಡರಾತ್ರಿ ಹಿಂದೂ ಕಾರ್ಯಕರ್ತರಿಂದ ಡಿಸಿ ಬರಬೇಕೆಂದು ಧರಣಿ| ಇಂದು ಮೆರವಣಿಗೆಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ; ಬಂದ್ ಗೆ ಕರೆ
ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಕುಟುಂಬಸ್ಥರು ಡಿಸಿ ಬರಬೇಕೆಂದು ಪಟ್ಟು ಹಿಡಿದು ಮೃತದೇಹ ತೆಗೆಯಲು ಬಿಡದೇ ಪ್ರತಿಭಟನೆ ನಡೆಸಿದ ಘಟನೆ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಮುಂಭಾಗ ನಡೆಯಿತು. ಬಳಿಕ ತಡ ರಾತ್ರಿ ಮಂಗಳೂರಿನಿಂದ ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜತೆ ಮಾತನಾಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು. ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ಘೋಷಣೆಯಾಗುತ್ತಲೇ ಪುತ್ತೂರು ಸುಳ್ಯ ಬೆಳ್ಳಾರೆಯಲ್ಲಿ ಪರಿಸ್ಥಿತಿ ಬಿಗುವಿನಿಂದ […]