July 2022

ಸುರತ್ಕಲ್ : ಬೈಕ್ ಸವಾರನ‌ ಮೇಲೆ ಹರಿದ ಲಾರಿ| ಸ್ಥಳದಲ್ಲೇ ಯುವಕ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಮೃತ ದುರ್ದೈವಿ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು […]

ಸುರತ್ಕಲ್ : ಬೈಕ್ ಸವಾರನ‌ ಮೇಲೆ ಹರಿದ ಲಾರಿ| ಸ್ಥಳದಲ್ಲೇ ಯುವಕ ದುರ್ಮರಣ Read More »

ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಶಿಫಾರಸ್ಸು ವಿವಾದ| ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ – ಪಿ.ಸಿ ಜಯರಾಮ

ಸಮಗ್ರ ನ್ಯೂಸ್: ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು. 21 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆದು ಶಾಸಕರಾಗಿ ಹಾಗೂ ಸಚಿವರಾಗಿ ಸುಳ್ಯದಲ್ಲಿ ಎಸ್ ಅಂಗಾರ ಆಯ್ಕೆಯಾಗಿದ್ದಾರೆ. ಇವರು ಪಕ್ಷದ ಸೇವೆ ಮಾಡುವುದು ಮಾತ್ರವಲ್ಲದೆ ಜನಸಾಮಾನ್ಯರ ಸೇವೆ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರುವ ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ . ಪಕ್ಷದಲ್ಲಿ

ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ಶಿಫಾರಸ್ಸು ವಿವಾದ| ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ – ಪಿ.ಸಿ ಜಯರಾಮ Read More »

ಶಿರಾಡಿ ಘಾಟ್ ನಲ್ಲಿ ಹಗಲು ಲಘು ವಾಹನ ಸಂಚಾರಕ್ಕೆ ಅವಕಾಶ – ಹಾಸನ ಡಿಸಿ ಗಿರೀಶ್ ಆರ್ ಆದೇಶ

ಸಮಗ್ರ ನ್ಯೂಸ್: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6

ಶಿರಾಡಿ ಘಾಟ್ ನಲ್ಲಿ ಹಗಲು ಲಘು ವಾಹನ ಸಂಚಾರಕ್ಕೆ ಅವಕಾಶ – ಹಾಸನ ಡಿಸಿ ಗಿರೀಶ್ ಆರ್ ಆದೇಶ Read More »

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ!

ಸಮಗ್ರ ನ್ಯೂಸ್: ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಮತ್ತು ರಾಸಲೀಲೆ ಪ್ರಕರಣವು ಟ್ರುಥ್ ಅಂಡ್ ಡೇರ್ ಗೇಮ್ ಹಿನ್ನೆಲೆಯಲ್ಲಿ ನಡೆದಿದೆ. ಸದ್ಯ ಇದರ ವೀಡಿಯೋ ವೈರಲ್‌ಗೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ. ಈ ಬಗ್ಗೆ ಕಾಲೇಜಿಗೆ ಹೋಗಿ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಘಟನೆ ನಾಲ್ಕೈದು ತಿಂಗಳ ಹಿಂದೆ ನಡೆದಿದೆ. ಆದರೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಟ್ರುಥ್& ಡೇರ್ ಗೇಮ್ ಜೊತೆ ಸೆಕ್ಸ್| ನಾಲ್ಕೈದು ತಿಂಗಳ ಹಿಂದೆಯೇ ನಡೆದಿತ್ತು ಪ್ರಕರಣ! Read More »

ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು| ಸಂಭ್ರಮದ ಮನೆಯಲ್ಲಿ ಸೂತಕ

ಸಮಗ್ರ‌ ನ್ಯೂಸ್: ಮದುವೆ ಆರತಕ್ಷತೆ ವೇಳೆಯೇ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊನ್ನೂರ ಸ್ವಾಮಿ (26) ಮೃತ ದುರ್ದೈವಿ. ಮದುವೆ ಆರಕ್ಷತೆ ವೇಳೆ ಎಲ್ಲರೂ ಶುಭಕೋರುವ ಸಂದರ್ಭದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಹೊನ್ನೂರಸ್ವಾಮಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಸಲಹೆ ನೀಡಿದ್ದ ವೈದ್ಯರು, ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆಯೇ ವರ ಹೊನ್ನೂರಸ್ವಾಮಿ ಮೃತಪಟ್ಟಿದ್ದಾರೆ. ಸಂಭ್ರಮದ ಮದುವೆ ಮನೆಯಲ್ಲಿ

ಆರತಕ್ಷತೆ ವೇಳೆ ಹೃದಯಾಘಾತದಿಂದ ವರ ಸಾವು| ಸಂಭ್ರಮದ ಮನೆಯಲ್ಲಿ ಸೂತಕ Read More »

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ|

ಸಮಗ್ರ ನ್ಯೂಸ್: ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಜನಾಂಗದ ಮಹಿಳೆಯೋರ್ವರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಸ್ಪರ್ಧಿಸಿದ್ದರು. ದ್ರೌಪದಿ ಮುರ್ಮು ಅವರಿಗೆ ಯುಪಿಎ ಮೈತ್ರಿಕೂಟದಲ್ಲಿದ್ದ ಕೆಲವೊಂದು ಪಕ್ಷಗಳು ಬೆಂಬಲಿಸಿದ್ದು ಗಮನಾರ್ಹ.

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ| Read More »

ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್ ಮತ್ತು ಭಾಸ್ಕರ್ ಬಂಧಿತರಾಗಿದ್ದಾರೆ.‌ ಬಂಧಿತ ಆರೋಪಿಗಳ

ಸುಳ್ಯ: ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು Read More »

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು

ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳಾಗಿದ್ದಾರೆ. ಶೆಡ್​ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್​ಮೆಂಟ್ ಗೋಡೆ

ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು Read More »

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ Read More »

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು

ಕೋಲಾರ: ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಹೋಂಡಾ ಕಂಪನಿಗೆ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ವೇಮಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಮತ್ತು ಕಾರು ನಡುವೆ ಅಪಘಾತ; ಇಬ್ಬರು ಸಾವು Read More »