July 2022

ಚಾಕೊಲೇಟ್ ಗಂಟಲಲ್ಲಿ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು

ಸಮಗ್ರ ನ್ಯೂಸ್: ಕವರ್‌ ಸಹಿತ ಚಾಕಲೇಟ್‌ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ದಾರುಣವಾಗಿ ಸಾವನ್ನಪ್ಪಿರು ಘಟನೆ ಕುಂದಾಪುರ ತಾಲೂಕಿನ ಉಪ್ಪುಂದ ಬಿಜೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಳವಾಡಿಯಲ್ಲಿ ಬುಧವಾರ ನಡೆದಿದೆ. ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ ಮೃತ ಬಾಲಕಿ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿ ಸಮನ್ವಿ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಾಧಾನಪಡಿಸಲು ಅಮ್ಮ ಚಾಕಲೇಟ್‌ ನೀಡಿದ್ದಾರೆ. ಈ ವೇಳೆ ಶಾಲಾ […]

ಚಾಕೊಲೇಟ್ ಗಂಟಲಲ್ಲಿ ಸಿಲುಕಿ ಎರಡನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು Read More »

ಬಂಟ್ವಾಳ ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಮಾರುತಿ ಬಲೆರೊ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಬಿದ್ದ ಘಟನೆಯೊಂದು ಬುಧವಾರ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಕುಶಾಂತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದು, ಕಾರು ಜಖಂಗೊಂಡಿದೆ. ಸಂಪೂರ್ಣವಾಗಿ ಜಖಂಗೊಂಡ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ ಎಂಬ ಮಾಹಿತಿ ದೊರಕಿವೆ.

ಬಂಟ್ವಾಳ ; ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಕಾರು Read More »

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ವರ್ಷದ ಬಾಲಕ‌ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಾಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಸಂದೀಪ ಸಿದ್ದಪ್ಪ ಮಲ್ಲೂರ (11) ಸ್ಥಳದಲ್ಲೇ ಸಾವನ್ನಪ್ಪಿದ್ದು, ಶಿವಪ್ಪ ಬಸವಂತಗೌಡ ಮಲ್ಲೂರ (46) ಬೆಳಗಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ಮತ್ತೊಬ್ಬ ಸವಾರ ವೀರಣ್ಣ ಚನ್ನಬಸಪ್ಪ ಬಗನಾಳ

ಬೈಕ್ ಮತ್ತು ಕಾರು ಅಪಘಾತ; ಒಂದೇ ಕುಟುಂಬದ ಇಬ್ಬರು ಸಾವು Read More »

ಮಂಡ್ಯ ಜಿಲ್ಲೆ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಇಂದು ಮೈಸೂರು, ಮಂಡ್ಯ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ಆಶೀರ್ವಾದ ಪಡೆದರು. ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನ ಹೆಚ್​​​​ಎಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ‌ ಬೆಳಗ್ಗೆ 9.20ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು. ರಸ್ತೆ ಮೂಲಕ ಬೆಳಗ್ಗೆ 9.45ಕ್ಕೆ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಧಂತಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅರ್ಚನೆಯನ್ನು ಮಾಡಿಸಿದರು. ಸಚಿವರಾದ ಗೋವಿಂದ

ಮಂಡ್ಯ ಜಿಲ್ಲೆ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ Read More »

ಮತ್ತೆ ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ| ಕೆ.ಜಿ ಗೆ450ರ ಸನಿಹದಲ್ಲಿ ಚಾಲಿ ಅಡಿಕೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ತಟಸ್ಥವಾಗಿದ್ದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ ಎರಡು ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ. ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ. ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ

ಮತ್ತೆ ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ| ಕೆ.ಜಿ ಗೆ450ರ ಸನಿಹದಲ್ಲಿ ಚಾಲಿ ಅಡಿಕೆ Read More »

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ

ಸಮಗ್ರ ನ್ಯೂಸ್: ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ವಿರುದ್ಧ ಕೇಸ್ ದಾಖಲಾಗಿರುವ ವಿಚಾರ ಸಂಬಂಧ ಇದೀಗ ನವ್ಯಶ್ರೀ ಆಡಿಯೋ ರಿಲೀಸ್ ಮಾಡಿದ್ದಾರೆ. ರಾಜಕುಮಾರ, ನವ್ಯಶ್ರೀ ಮತ್ತು ನವ್ಯಶ್ರೀ ಆಪ್ತ ತಿಲಕ್ ಜೊತೆಯಾಗಿ ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ರಿಲೀಸ್ ಮಾಡಿರುವ ಆಡಿಯೊ ಸಂಭಾಷಣೆಯಲ್ಲಿ, ನಾನು ಒಪ್ಪಿಕೊಂಡಿದ್ದೇನೆ, ಅವಳು ಒಪ್ಪಿಕೊಂಡಿದ್ದಾಳೆ ನನ್ನ ಹೆಂಡತಿಯನ್ನೂ ಒಪ್ಪಿಸುತ್ತೇನೆ. ನನ್ನ ಹೆಂಡತಿ ಮಕ್ಕಳ ಜೊತೆಗೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ನನ್ನ ಮಗಳಿಗೂ ಹೇಳಿದ್ದೇನೆ ಏನೂ ತೊಂದರೆ ಇಲ್ಲಾ ಎಂದು ರಾಜಕುಮಾರ

ಬೆಳಗಾವಿ: ಕಾಂಗ್ರೆಸ್ ನಾಯಕಿ ನವ್ಯಶ್ರೀ ಮೇಲೆ ಕೇಸ್ ದಾಖಲು| ಹೊಸತೊಂದು ಆಡಿಯೋ ರಿಲೀಸ್ ಮಾಡಿದ ನವ್ಯಶ್ರೀ Read More »

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ! Read More »

ಸುಳ್ಯ: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ| ಜೀವನ್ಮರಣ ಹೋರಾಟದಲ್ಲಿ ಗಾಯಾಳು

ಸಮಗ್ರ ನ್ಯೂಸ್: ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸುಳ್ಯದ ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮಾರಣಾಂತಿಕ ಹಲ್ಲೆಯಿಂದ ಗಂಭೀರ ಗಾಯಗೊಂಡ ಮಸೂದ್ (19) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಮೆದುಳಿಗೆ ತೀವ್ರ ಹಾನಿ ಯಾಗಿರುವುದರಿಂದ ಮೆದುಳು ನಿಷ್ಕ್ರಿಯಗೊಂಡಿರುವ ಸಾಧ್ಯತೆ

ಸುಳ್ಯ: ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ| ಜೀವನ್ಮರಣ ಹೋರಾಟದಲ್ಲಿ ಗಾಯಾಳು Read More »

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ

ಸಮಗ್ರ ನ್ಯೂಸ್: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್ ನಿರ್ಮಿತ “ಡಿವೈನ್ ಟೈಡ್ಸ್” ಆಲ್ಬಂಗೆ ಇಂಜಿನೀಯರಿಂಗ್ ಮತ್ತು ಮಿಕ್ಸಿಂಗ್ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದರು. ಅದೇ ವಿಭಾಗದಲ್ಲಿ ಈಗ ಜಗತ್ತಿನಲ್ಲಿಯೇ ಸಂಗೀತ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದು ಕರ್ನಾಟಕದ ಎರಡನೇ ಗ್ರ್ಯಾಮಿ ವಿಜೇತರೆಂಬ ಖ್ಯಾತಿಯನ್ನು ಪಡೆದಿದ್ದಾರೆ. 64 ವರ್ಷಗಳ ಗ್ರ್ಯಾಮಿ

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ Read More »

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ. ಇದುವರೆಗೂ ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ. ತಮ್ಮ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ Read More »