July 2022

ಸರ್ಕಾರಿ‌ ಆದೇಶದಲ್ಲಿ ಕನ್ನಡದ ಕಗ್ಗೊಲೆ| ಆಕ್ರೋಶದ ಬೆನ್ನಲ್ಲೇ ಹೊಸ ಆದೇಶ ಪ್ರತಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡುವುದನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಅನೇಕರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸಿಎಂ ಬೊಮ್ಮಾಯಿ ತಕ್ಷಣವೇ ಆದೇಶ ವಾಪಸ್ ಪಡೆಯುವಂತೆ ಸೂಚಿಸಿದ್ದರು. […]

ಸರ್ಕಾರಿ‌ ಆದೇಶದಲ್ಲಿ ಕನ್ನಡದ ಕಗ್ಗೊಲೆ| ಆಕ್ರೋಶದ ಬೆನ್ನಲ್ಲೇ ಹೊಸ ಆದೇಶ ಪ್ರತಿ ಪ್ರಕಟ Read More »

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ ಮರ ಬಿದ್ದಿದ್ದು, ಮರ ಬಿದ್ದಿರುವ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಮರ ತೆರವುಗೊಳಿಸಿದ್ದಾರೆ. ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸಂಚಾರಕ್ಕೆ ತೊಂದರೆಯಾಗಿತ್ತು.

ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ Read More »

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಶ್ರೀ ಪಂಚಲಿಂಗೇಶ್ವರನಿಗೆ ಪೂಗಮನ ಕಲ್ಪವೃಕ್ಷ ಸೇವೆ ಸಮಿತಿಯ, ಜಂಟಿ ಐತಿಹಾಸಿಕ ಯೋಜನೆಯ ಪ್ರಯುಕ್ತ ” ವಿಜ್ಞಾಪನಾ ಪತ್ರ” ಬಿಡುಗಡೆಯ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಪತ್ರದ ಬಿಡುಗಡೆಯನ್ನು ಪೂಗಮನ ಸಮಿತಿಯ ಅಧ್ಯಕ್ಷರಾದ ಶ್ರೀ ದಾಸಪ್ಪ ಗೌಡ ಕೋಡ್ತಿಲು ನೆರವೇರಿಸಿದರು. ಸಮಿತಿಯ ಸಂಯೋಜಕರಾದ ಶ್ರೀ ಕೃಷ್ಣ ಪ್ರಸಾದ್ ಮಡ್ತಿಲ, ಕಾರ್ಯ ಯೋಜನೆಯ ಪೂರ್ವ ತಯಾರಿಯ ಬಗ್ಗೆ ಮಾತನಾಡಿ, ಊರ ಸಮಸ್ತರು ಭಕ್ತಿಪೂರ್ವಕವಾಗಿ ತನು-ಮನ-ಧನಗಳ ಪೂರ್ವಕ ಈ

ಐವರ್ನಾಡು; ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಐತಿಹಾಸಿಕ ಯೋಜನೆಯ “ವಿಜ್ಞಾಪನಾ ಪತ್ರ” ಬಿಡುಗಡೆ Read More »

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ Read More »

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ

ಹುಬ್ಬಳ್ಳಿ:  ಸಿಲಿಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ತಮ್ಮ ಅಣ್ಣನಿಗೆ ಚಾಕುವಿನಿಂದ ಇರಿದು, ಸೆಂಟ್ರಿಂಗ್ ಗನ್’ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮುನ್ನಾ ಶಿಗ್ಗಾಂವ (27) ಹಲ್ಲೆಗೆ ಒಳಗಾಗಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಯಾಜ್ ಹಾಗೂ ಅನ್ವರ್ ಆರೋಪಿಗಳಾಗಿದ್ದು ಬಂಧಿಸಲಾಗಿದೆ.ಕಸ್ತೂರಬಾ ನಗರದ ತಾಯಿ ಮನೆಯಲ್ಲಿದ್ದ ಸಿಲಿಂಡರ್’ನ್ನು ತೆಗೆದುಕೊಂಡು ಹೋಗಲು ಬಂದಿದ್ದ ಮುನ್ನಾ ತಾಯಿ ಜೊತೆಗೆ ಜಗಳ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ತಮ್ಮ ರಿಯಾಜ್ ಹಾಗೂ ಅನ್ವರ್

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ Read More »

ಮದ್ಯ ಮಾರಾಟದಲ್ಲಿ ದ.ಕ ಟಾಪರ್ ಅಲ್ಲ| ಸ್ಪಷ್ಟನೆ ನೀಡಿದ ಅಬಕಾರಿ ಡಿಸಿ

ಸಮಗ್ರ ನ್ಯೂಸ್: ಮದ್ಯ ಮಾರಾಟದಲ್ಲಿ ದ.ಕ ಜಿಲ್ಲೆ ಇಡೀ ರಾಜ್ಯಕ್ಕೆ ಟಾಪರ್ ಎಂಬ ಸುದ್ದಿ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ತಾಣಗಳಲ್ಲೂ ಭಾರೀ ವೈರಲ್ ಆಗಿತ್ತು. ಆದರೆ ಈ ಸುದ್ದಿಗೆ ಸಂಬಂಧಿಸಿದಂತೆ ಮಂಗಳೂರು ಅಬಕಾರಿ ಡಿಸಿ ಬಿಂದುಶ್ರೀ ಸ್ಪಷ್ಟನೆ ನೀಡಿದ್ದು, ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. ಈ ಕುರಿತು ಸ್ಪಷ್ಟನೆ ‌ನೀಡಿದ ಮಂಗಳೂರು ಅಬಕಾರಿ ಡಿಸಿ ಬಿಂದುಶ್ರೀ, ಈ ವರದಿಯನ್ನು ನಾವು ಯಾರಿಗೂ ಕೊಟ್ಟಿಲ್ಲ. ‌ರಾಜ್ಯದಲ್ಲಿ ದ‌.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಮದ್ಯ ಮಾರಾಟ ಎನ್ನುವುದು ಸರಿಯಲ್ಲ.

ಮದ್ಯ ಮಾರಾಟದಲ್ಲಿ ದ.ಕ ಟಾಪರ್ ಅಲ್ಲ| ಸ್ಪಷ್ಟನೆ ನೀಡಿದ ಅಬಕಾರಿ ಡಿಸಿ Read More »

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ನ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ Read More »

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ

ಸಮಗ್ರ ನ್ಯೂಸ್: ಸಕಲೇಶಪುರದ ದೋಣಿಗಲ್ ಬಳಿ ಭೂಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಭಾರೀ ಗಾತ್ರದ ಟ್ರಕ್ಕ್ ಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದು, ಸಂಚಾರ ಅಸ್ತವ್ಯಸ್ಥವಾಗಿದೆ. ಇದರಿಂದ ಗುಂಡ್ಯ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ಪ್ರಯಾಣಿಸುವ ವಾಹನಗಳಿಗೆ ತೊಂದರೆಯುಂಟಾಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಅಡ್ಡಹೊಳೆಯಿಂದ ಗುಂಡ್ಯ ಸಕಲೇಶಪುರ ರಸ್ತೆಯ ತುಂಬಾ ಟ್ರಕ್ಕುಗಳು ಸಾಲುಗಟ್ಟಿವೆ

ಶಿರಾಡಿ ಘಾಟ್ ಸಂಚಾರ ಸ್ಥಗಿತ| ಕಿ.ಮೀ ಗಟ್ಟಲೆ ಟ್ರಾಫಿಕ್ ಜ್ಯಾಂ Read More »

ಮಂಗಳೂರು: ಮಳಲಿ ಮಸೀದಿ ವಿವಾದ| ಹಿಂದೂ ಸಂಘಟನೆಗಳ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಜ್ಞಾನವಾಪಿ ಮಾದರಿಯಂತೆ ಹೈಕೋರ್ಟ್ ಕೂಡ ಕಮಿಷನರ್ ನೇಮಕ ಮಾಡಬೇಕೆಂದು ಹಿಂದು ಮುಖಂಡರು ಅರ್ಜಿ ಸಲ್ಲಿಸಿದ್ದರು. ಹಾಗೇ ಅರ್ಜಿ ಸಿಂಧುತ್ವ ತೀರ್ಮಾನಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಲು ಅರ್ಜಿಯಲ್ಲಿ ಕೋರಿದ್ದರು. ಅರ್ಜಿಗೆ ಜುಮ್ಮಾ ಮಸೀದಿ ಪರ ವಕೀಲ ಸಿರಿಲ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣಾ ನ್ಯಾಯಾಲಯ ಅರ್ಜಿ ಸಿಂಧುತ್ವದ ಬಗ್ಗೆ ನಿರ್ಧರಿಸಬೇಕು. ಅರ್ಜಿ ಊರ್ಜಿತವಾಗದೇ ಕೋರ್ಟ್

ಮಂಗಳೂರು: ಮಳಲಿ ಮಸೀದಿ ವಿವಾದ| ಹಿಂದೂ ಸಂಘಟನೆಗಳ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ರಾಜ್ಯದಲ್ಲಿ ಮುಂದುವರಿದ ಮಳೆಯಾರ್ಭಟ| ಹಲವೆಡೆ ಜನಜೀವನ ಅಸ್ತವ್ಯಸ್ತ| ಮಲೆನಾಡಿನ ಕೆಲವೆಡೆ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ಎರಡು ದಿನಗಳಿಂದ ಕೊಂಚ ವಿರಾಮ ನೀಡಿದ್ದ ವರುಣ ಮತ್ತೆ ಅಬ್ಬರಿಸುತ್ತಿದ್ದಾನೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಆಗಲಿದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಂದಿನಂತೆ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಮೋಡ ಮತ್ತು ಸೂರ್ಯನ ನಡುವೆ ಕಣ್ಣಾಮುಚ್ಚಾಲೆಯ ಆಟ ಇರಲಿದ್ದು, ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿದ್ದು ಬೆಳಗಾವಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬೆಳಗಾವಿಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಮತ್ತೊಂದು

ರಾಜ್ಯದಲ್ಲಿ ಮುಂದುವರಿದ ಮಳೆಯಾರ್ಭಟ| ಹಲವೆಡೆ ಜನಜೀವನ ಅಸ್ತವ್ಯಸ್ತ| ಮಲೆನಾಡಿನ ಕೆಲವೆಡೆ ಶಾಲೆಗಳಿಗೆ ರಜೆ Read More »