July 2022

ಭ್ರಷ್ಟರ ರಕ್ಷಣೆಗೆ ಮುಂದಾಗಿದ್ದ ರಾಜ್ಯಸರ್ಕಾರದ ನಡೆಗೆ ಆಕ್ರೋಶ| ಕಚೇರಿಗಳಲ್ಲಿ ಫೋಟೋ ವಿಡಿಯೋ ಶೂಟಿಂಗ್ ನಿಷೇಧ ಆದೇಶ ವಾಪಾಸ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ಆದರೆ ಭ್ರಷ್ಟರಿಗೆ ಅನುಕೂಲವಾಗಬಲ್ಲ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡರಾತ್ರಿ ಈ ಆದೇಶವನ್ನು ವಾಪಸ್ […]

ಭ್ರಷ್ಟರ ರಕ್ಷಣೆಗೆ ಮುಂದಾಗಿದ್ದ ರಾಜ್ಯಸರ್ಕಾರದ ನಡೆಗೆ ಆಕ್ರೋಶ| ಕಚೇರಿಗಳಲ್ಲಿ ಫೋಟೋ ವಿಡಿಯೋ ಶೂಟಿಂಗ್ ನಿಷೇಧ ಆದೇಶ ವಾಪಾಸ್ Read More »

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು, ಸಂಬಂಧ ಕೆಟ್ಟ ಮೇಲೆ ಅತ್ಯಾಚಾರವಾಯ್ತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿತ್ತಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ‌ನಡೆಸಿದ ಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್ Read More »

ಸಮುದ್ರದಲ್ಲಿ ಕೊಚ್ಚಿಹೋದ ಒಂದೇ ಕುಟುಂಬ| ಓಮಾನ್ ಕರಾವಳಿಯಲ್ಲಿ ಭಾರತೀಯ ಕುಟುಂಬ ಜಲಸಮಾಧಿ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಮೂವರು ಸಮುದ್ರ ಪಾಲಾಗಿರುವ ಘಟನೆ ಒಮಾನ್ ಕರಾವಳಿ ತೀರದಲ್ಲಿ ನಡೆದಿದೆ. ಕೊಚ್ಚಿಹೋದ ಮೂವರು ಭಾರತೀಯ ಮೂಲದವರೆಂದು ತಿಳಿದುಬಂದಿದೆ. ರಜೆಯನ್ನು ಆನಂದವಾಗಿ ಕಳೆಯಲು ಹೋಗಿದ್ದ ಕುಟುಂಬಕ್ಕೀಗ ಬರಸಿಡಿಲು ಬಡಿದಂತಾಗಿದೆ. ಪತಿ ತನ್ನ ಮಕ್ಕಳನ್ನು ಕಳೆದುಕೊಂಡ ಮಹಿಳೆಯ ಆಕ್ರಂದನ ಮುಗಿಲು ಮುಟ್ಟಿತ್ತು. ದೈತ್ಯಾಕಾರ ಅಲೆಗಳಿಗೆ ಕೊಚ್ಚಿಹೋಗಿದ್ದ ತಂದೆ-ಮಗನ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಕಣ್ಮರೆಯಾಗಿದ್ದಾಳೆ. ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳು ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಶಶಿಕಾಂತ್ ಮೆಕ್ಯಾನಿಕಲ್ ಇಂಜಿನಿಯರ್

ಸಮುದ್ರದಲ್ಲಿ ಕೊಚ್ಚಿಹೋದ ಒಂದೇ ಕುಟುಂಬ| ಓಮಾನ್ ಕರಾವಳಿಯಲ್ಲಿ ಭಾರತೀಯ ಕುಟುಂಬ ಜಲಸಮಾಧಿ Read More »

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಳೆಯಿಂದಾದ ಅನಾಹುತದಿಂದಾಗಿ ಸಾವಿನ ಸಂಖ್ಯೆ 100ರ ಗಡಿ ದಾಟಿದೆ. ಜೂನ್​ 1 ರಿಂದ ಈವರೆಗೆ 102 ಮಂದಿ ಮೃತಪಟ್ಟಿದ್ದು, ನಿನ್ನೆ ಒಂದೇ ದಿನದಲ್ಲಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ. ಬುಲ್ಧಾನಾ, ನಾಸಿಕ್​ ಮತ್ತು ನಂದುಬಾರ್​ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭೂ ಕುಸಿತ, ಮರಗಳು ಉರುಳಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಳ್ಳಿಗಳಲ್ಲಿರುವ ಮನೆಗಳು ಸಹ ಕಾಣಿಸದಷ್ಟು

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ Read More »

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ದೋಲ್ಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಲೋಕೇಶ್(21) ಎಂದು‌ ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ ಕೆಲ ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿದ್ದು, ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿತ್ತು. ಬುಧವಾರ(ಜು.13) ರ ತಡರಾತ್ರಿ ಈತ ವಿಷ ಸೇವಿಸಿದ್ದು, ವಾಂತಿ ಮಾಡುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾಗಿ‌ ಹೇಳಲಾಗಿದೆ. ಮೃತರು, ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ Read More »

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್

ಸಮಗ್ರ ನ್ಯೂಸ್: ಕರಾವಳಿ ಹಾಗೂ ಬೆಂಗಳೂರು ಸಂಪರ್ಕ ಕೊಂಡಿಯಂತಿರುವ ಶಿರಾಡಿಘಾಟ್‌ ರಸ್ತೆಯಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಶಿರಾಡಿಘಾಟ್‌ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಹಾಸನ ಎಸ್‌ಪಿ ಜೈರಾಂ ಶಂಕರ್‌ ಅವರು ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಭೂ ಕುಸಿತ ಉಂಟಾಗಿದ್ದು, ಸಂಚಾರಕ್ಕೆ ಅಪಾಯವನ್ನು ತಂದೊಡ್ಡಿದೆ. ಜೊತೆಗೆ ಕಳೆದ

ದೋಣಿಗಲ್ ನಲ್ಲಿ ಮತ್ತೆ ಭೂಕುಸಿತ| ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್ Read More »

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ Read More »

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆಯೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು Read More »

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ

ನವದೆಹಲಿ: ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ ಶೀಘ್ರವೇ ಇತಿಹಾಸದ ಪುಟಗಳನ್ನು ಸೇರಲಿದೆ. ಮಳೆಗಾಲದ ಸಂಸತ್ ಅಧಿವೇಶನ ನಡೆಯಲಿದ್ದು, ಇದೇ ಕೊನೆಯ ಅಧಿವೇಶನ ಆಗಲಿದೆ. ಸೋಮವಾರದಿಂದ ಮಳೆಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುತ್ತಿದೆ. ಬಳಿಕ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಸೆಂಟ್ರಲ್ ವಿಸ್ತಾರ ಭಾಗವಾಗಿ ಮೋದಿ ಸರ್ಕಾರ ನಿರ್ಮಿಸುತ್ತಿರುವ ನೂತನ ಸಂಸತ್ ಭವನದಲ್ಲಿ ನಡೆಸುವುದಾಗಿ ಈಗಾಗಲೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. ಹಾಲಿ ಸಂಸತ್ ಭವನದಲ್ಲಿಯೇ ನೂತನ ರಾಷ್ಟ್ರಪತಿ ಚುನಾವಣೆ ಜುಲೈ 19 ರಂದು ನಡೆಯಲಿದೆ. ಆಗಸ್ಟ್

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ Read More »

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧಿಸಿ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿದ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬವರು ದೂರು ನೀಡಿದ್ದ

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ Read More »